ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ದ.ಕ. ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ!

liquor
02/05/2025

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 2ರಿಂದ ಮೇ 3ರ ಬೆಳಗ್ಗೆ 6 ಗಂಟೆಯ ವರೆಗೆ ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಕೊಲೆಯಾದ ಸುಹಾಸ್ ಶೆಟ್ಟಿ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದೆ. ಆದ್ದರಿಂದ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಂತೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಈ ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version