ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಕೊಪ್ಪಳದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ
ಬೆಂಗಳೂರು: ಈ ಬಾರಿಯ ವಿಶ್ವಪ್ರಸಿದ್ಧ ನಾಡಹಬ್ಬ ಮೈಸೂರು ದಸರಾವನ್ನು ಕೊಪ್ಪಳದ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಗುರುವಾರ ನಡೆದ ಬರಗಾಲದ ಕುರಿತಾದ ಚರ್ಚೆಯ ಸಂದರ್ಭದಲ್ಲಿ ಉತ್ತರಿಸುತ್ತಾ ಅವರು ಈ ಮಹತ್ವದ ವಿಷಯವನ್ನು ಪ್ರಕಟಿಸಿದರು.
ಈ ಬಾರಿ ದಸರಾ ಮಹೋತ್ಸವವನ್ನು ಉದ್ಘಾಟಿಸುವಂತೆ ಕೋರಿ ಕೊಪ್ಪಳದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳಿಗೆ ಆಹ್ವಾನ ಪತ್ರ ಕಳುಹಿಸಲಾಗಿತ್ತು. ಇಂದು ಬೆಳಗ್ಗೆ ಅವರೊಂದಿಗೆ ದೂರವಾಣಿ ಮೂಲಕವೂ ಮಾತನಾಡಲಾಗಿದ್ದು, ಶ್ರೀಗಳು ನಮ್ಮ ಆಹ್ವಾನವನ್ನು ಸಂತೋಷದಿಂದ ಒಪ್ಪಿಕೊಂಡಿದ್ದಾರೆ ಎಂದು ಸಿಎಂ ತಿಳಿಸಿದರು.
ಮುಂದಿನ ತಿಂಗಳು ನಾಡಹಬ್ಬ ದಸರಾ ಉತ್ಸವ ಆರಂಭಗೊಳ್ಳಲಿದ್ದು, ಈ ವರ್ಷದ ದಸರಾ ಉದ್ಘಾಟನಾ ಕಾರ್ಯಕ್ರಮ ಹಾಗೂ ಮಹೋತ್ಸವಕ್ಕೆ ವಿಧಾನಸಭೆಯ ಎಲ್ಲ ಸದಸ್ಯರನ್ನು ಮುಖ್ಯಮಂತ್ರಿಗಳು ಪ್ರೀತಿಯಿಂದ ಆಹ್ವಾನಿಸಿದರು. ಎಲ್ಲರೂ ದಸರಾ ಉತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

























