ನಮ್ಮ ನಾಡ ಒಕ್ಕೂಟದ ಕಚೇರಿ ಉದ್ಘಾಟನಾ ಸಮಾರಂಭ
ಕುಂದಾಪುರ: ಶಾಸ್ತ್ರೀ ಸರ್ಕಲ್ ಬಳಿ ಪ್ಲೇಸೆಂಟ್ ಕಾಂಪ್ಲೆಕ್ಸ್ ನಲ್ಲಿ ಕೇಂದ್ರ ಸಮಿತಿ ಉಪಾಧ್ಯಕ್ಷರಾದ ಡಾ.ರಿಝ್ವಾನ್ ಅಹ್ಮದ್ ಕಾರ್ಕಳರವರ ಅಧ್ಯಕ್ಷತೆಯಲ್ಲಿ ನಮ್ಮ ನಾಡ ಒಕ್ಕೂಟದ ಕಚೇರಿ ಉದ್ಘಾಟನಾ ಸಮಾರಂಭ ನಡೆಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೌ. ಝಮೀರ್ ಅಹ್ಮದ್ ರಶಾದಿಯವರ ಕುರ್ ಆನ್ ಪಠಣದೊಂದಿಗೆ ಸಭೆ ಆರಂಭವಾಯಿತು. ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿಯವರು ಸ್ವಾಗತ ಭಾಷಣ ಮಾಡಿದರು. ಮಾಜಿ ಶಾಸಕರಾದ ಗೋಪಾಲ ಪೂಜಾರಿ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾದ ಶಿರಿಯಾರ ವಕೀಲರು ಗೋಪಾಲಕೃಷ್ಣ ಶೆಟ್ಟಿ, ಮಾಜಿ ಕುಂದಾಪುರ ಪುರಸಭೆ ಉಪಾಧ್ಯಕ್ಷರು ರಾಜೇಶ್ ಕಾವೇರಿ, ಎಮ್.ಸಿ.ಸಿ. ಬ್ಯಾಂಕ್ ಲಿಮಿಟೆಡ್ ಕುಂದಾಪುರದ ನಿರ್ದೇಶಕರು ಕಿರಣ್ ಕ್ರಾಸ್ತಾ, ಉದ್ಯಮಿ ಸತೀಶ್ ಕಿಣಿ ಬೆಳ್ವೆ, ಜೆಸಿಐ ಕುಂದಾಪುರ ಸಿಟಿ ಪೂರ್ವಾಧ್ಯಕ್ಷರು ರಾಘವೇಂದ್ರ ಚರಣ್ ನಾವಡ, ಉದ್ಯಮಿ ಚೇರಿಯಬ್ಬ ಸಾಹೇಬ್ ಗುಲ್ವಾಡಿ, ಪ್ಲೇಸೆಂಟ್ ಮಾಲಕರಾದ ಬಶೀರ್ ಅಹ್ಮದ್ ಕೋಟ ಎನ್.ಎನ್.ಓ ಉಡುಪಿ ಜಿಲ್ಲಾಧ್ಯಕ್ಷರಾದ ಮುಷ್ತಾಕ್ ಅಹ್ಮದ್ ಬೆಳ್ವೆ, ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ಇನಾಯತುಲ್ಲಾ ಶಾಬಂದ್ರಿ ಭಟ್ಕಳ ಹಾಗೂ ಇತರರು ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.
ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹುಸೇನ್ ಕಾರ್ಕಳ, ಕೇಂದ್ರ ಸಮಿತಿ ಕೋಶಾಧಿಕಾರಿ ಅಬ್ದುಲ್ ಹಮೀದ್ ಮೂಡಬಿದ್ರೆ, ಜಿಲ್ಲಾ ಕೋಶಾಧಿಕಾರಿ ಸಯ್ಯದ್ ಅಜ್ಮಲ್ ಶಿರೂರು, ತಾಲೂಕು ಅಧ್ಯಕ್ಷರುಗಳು ಹಾಗೂ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಜಿಲ್ಲಾ ಉಪಾಧ್ಯಕ್ಷರಾದ ಮುಜಾವರ್ ಅಬು ಮುಹಮ್ಮದ್ ಕುಂದಾಪುರ ವಂದಿಸಿದರು. ಫಾಝಿಲ್ ಅಹ್ಮದ್ ಆದಿಉಡುಪಿ ನಿರೂಪಿಸಿದರು. ಸಮಾರಂಭದಲ್ಲಿ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಮತ್ತು ಸಮಾಜ ಸೇವಕರು ಭಾಗವಹಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka