ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ - Mahanayaka
11:40 AM Sunday 14 - September 2025

ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

pm modi
28/05/2023

ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದ್ದು ಬೆಳಗಿನ ಜಾವ ಪೂಜಾ ಕೈಂಕರ್ಯಗಳು ಮತ್ತು ಸೆಂಗೋಲ್​​ ಪ್ರತಿಷ್ಠಾಪನೆ ನೆರವೇರಿತು.


Provided by

ಉದ್ಘಾಟನಾ ಕಾರ್ಯಕ್ರಮದಲ್ಲಿ  ಹೋಮ, ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದ್ದು, ವಿಶೇಷ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್​ ​ ಓಂ ಬಿರ್ಲಾ ಭಾಗಿಯಾಗಿದ್ದಾರೆ. ಪೂಜಾ-ಕೈಂಕರ್ಯಗಳನ್ನು ಕರ್ನಾಟಕದ ಶೃಂಗೇರಿಯ ಪುರೋಹಿತರಾದ ಸೀತಾರಾಮ ಶರ್ಮಾ, ಶ್ರೀರಾಮ ಶರ್ಮಾ, ಲಕ್ಷ್ಮೀಶ ತಂತ್ರಿರಿಂದ ನೆರವೇರಿಸಿದರು.

ಮಧ್ಯಾಹ್ನ 12 ಗಂಟೆ ನಂತರ ಎರಡನೇ ಹಂತದ ಕಾರ್ಯಕ್ರಮ ಆರಂಭವಾಗಲಿದೆ. ಎರಡನೇ ಹಂತದ ಕಾರ್ಯಕ್ರಮದಲ್ಲಿ ದೇಶದ ಹಲವು, ವಿವಿಧ ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ. ಎರಡನೇ ಹಂತದ ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಅಧಿಕೃತ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಎರಡು ಕಿರುಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.

ಇದಾದ ಬಳಿಕ ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿಗಳ ಸಂದೇಶವನ್ನು ರಾಜ್ಯಸಭೆಯ ಉಪಾಧ್ಯಕ್ಷರು ಓದಲಿದ್ದಾರೆ. ನಂತರ ಲೋಕಸಭೆ ಸ್ಪೀಕರ್ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ 75 ರೂ ಮುಖಬೆಲೆಯ ನಾಣ್ಯ ಮತ್ತು ಅಂಚೆ ಚೀಟಿ ಬಿಡುಗಡೆ ಮಾಡಲಾಗುತ್ತದೆ. ಕೊನೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ