ಗೌರಿ ಗಣೇಶ ಹಬ್ಬ ಮುಗಿಸಿ ಮನೆಗೆ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರ ಸಹಿತ, ಐವರು ಭೀಕರ ಅಪಘಾತಕ್ಕೆ ಬಲಿ! - Mahanayaka
12:59 AM Saturday 18 - October 2025

ಗೌರಿ ಗಣೇಶ ಹಬ್ಬ ಮುಗಿಸಿ ಮನೆಗೆ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರ ಸಹಿತ, ಐವರು ಭೀಕರ ಅಪಘಾತಕ್ಕೆ ಬಲಿ!

tumakuru
09/09/2024

ತುಮಕೂರು: ಗೌರಿಗಣೇಶ ಹಬ್ಬ ಮುಗಿಸಿ ಮನೆಗೆ ಮರಳುತ್ತಿದ್ದ ನಾಲ್ವರು ಸೇರಿದಂತೆ ಒಟ್ಟು ಐವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.


Provided by

ಎರಡು ಕಾರುಗಳ ನಡುವೆ ಈ ಭೀಕರ ಅಪಘಾತ ನಡೆದಿದ್ದು, ಒಂದು ಕಾರಿನಲ್ಲಿದ್ದ ಇಬ್ಬರು ಮತ್ತೊಂದು ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಹಾಗೂ ಕಾಟಗಾನಹಳ್ಳಿ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ತುಮಕೂರು ಕಡೆಯಿಂದ ಬರುತ್ತಿದ್ದ ಸಿಯಾಜ್ ಮಾರುತಿ ಕಾರು ಹಾಗೂ ಮಧುಗಿರಿ ಕಡೆಗೆ ತೆರಳುತ್ತಿದ್ದ ಟಾಟಾ ಟಿಯಾಗೋ ಕಾರಿನ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.

ಒಂದೇ ಕುಟುಂಬದ ನಾಲ್ವರು ಸಾವು!

ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಒಟ್ಟು ಐವರು ಸಾವನ್ನಪ್ಪಿದ್ದಾರೆ. ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ  ಯೋಗೇಶ್ , ಅವರ ಪುತ್ರಿ ಸಿಂಧೂ(12) ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದವರಾಗಿದ್ದಾರೆ.

ಯೋಗೇಶ್ ಕುಟುಂಬಸ್ಥರು ಬೆಂಗಳೂರಿನ ಜೆ.ಪಿ.ನಗರದಲ್ಲಿ ವಾಸವಿದ್ದರು. ಗೌರಿ ಗಣೇಶನ ಹಬ್ಬಕ್ಕಾಗಿ ಊರಿಗೆ ಬಂದಿದ್ದರು. ವೈ.ಎನ್.ಹೊಸಕೋಟೆಯಿಂದ ಬೆಂಗಳೂರಿಗೆ ಈ ಕುಟುಂಬ ಹೊರಟಿತ್ತು. ಇನ್ನೊಂದೆಡೆ ಟಾಟಾ ಟಿಯಾಯೋ ಕಾರಿನಲ್ಲಿ  ನಾಗರಾಜ್ ಕೊರಟಗೆರೆಯಿಂದ ಮಧುಗಿರಿಗೆ ಪ್ರಯಾಣ ಆರಂಭಿಸಿದ್ದರು. ಮಧುಗಿರಿ ತಾಲೂಕಿನ ಕಾಟಗಾನಹಟ್ಟಿ ಹಾಗೂ ಕೆರೆಗಳಪಾಳ್ಯ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ