ಹೊಸ ಕ್ಯಾಪ್ಟನ್: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ನಾಯಕನಾಗಿ ಸೂರ್ಯಕುಮಾರ್ ಯಾದವ್ ಆಯ್ಕೆ

21/11/2023

ನವೆಂಬರ್ 23 ರಿಂದ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮುಂಬರುವ ಟಿ 20 ಐ ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಟೀಮ್ ಇಂಡಿಯಾದ ನಾಯಕರಾಗಿ ಘೋಷಿಸಲಾಗಿದೆ ಎಂದು ಕ್ರಿಕ್‌ಬಝ್ ವರದಿ ಮಾಡಿದೆ.

ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟಿ 20 ಐ ಸರಣಿಯಿಂದ ವಂಚಿತರಾಗಿದ್ದಾರೆ.
ಐರ್ಲೆಂಡ್ ನಲ್ಲಿ ಸ್ಪರ್ಧಿಸಿದ್ದ ತಂಡದ ಬಹುಪಾಲು ಆಟಗಾರರನ್ನು ಒಟ್ಟಿಗೆ ಇರಿಸಲಾಗಿದೆ. ಜಸ್ಪ್ರೀತ್ ಬುಮ್ರಾ ಮಾತ್ರ ಆ ಸರಣಿಗೆ ನಾಯಕರಾಗಿದ್ದ ತಂಡದ ಭಾಗವಾಗಿಲ್ಲ. ಪ್ರಸಿದ್ಧ್ ಕೃಷ್ಣ ಸರಣಿಯಲ್ಲಿ ಆಡುವ ಸಾಧ್ಯತೆ ಇದ್ರೆ, ಗಾಯಗೊಂಡ ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಗುಳಿದಿದ್ದಾರೆ.

ನವೆಂಬರ್ 23, 2023 ರಿಂದ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ 20 ಐ ಸರಣಿಗೆ ಪುರುಷರ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೇಳಿಕೆಯಲ್ಲಿ ತಿಳಿಸಿದೆ.

ಅಹಮದಾಬಾದ್ ನಲ್ಲಿ ನಡೆದ ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್ ಗಳಿಂದ ಸೋತು ತವರಿನಲ್ಲಿ ಭಾರತದ ಐಸಿಸಿ ಕ್ರಿಕೆಟ್ ವಿಶ್ವಕಪ್ ಅಭಿಯಾನ ಮುಗಿದ ನಾಲ್ಕು ದಿನಗಳ ನಂತರ ನವೆಂಬರ್ 23 ರಂದು ವಿಶಾಖಪಟ್ಟಣಂನಲ್ಲಿ ಮೊದಲ ಪಂದ್ಯ ನಡೆಯಲಿದೆ.

ಎರಡನೇ ಟಿ20 ಪಂದ್ಯ ನವೆಂಬರ್ 26 ರಂದು ತಿರುವನಂತಪುರಂನಲ್ಲಿ ನಡೆಯಲಿದ್ದು, ಮೂರನೇ ಪಂದ್ಯ ನವೆಂಬರ್ 28 ರಂದು ಗುವಾಹಟಿಯಲ್ಲಿ ನಡೆಯಲಿದೆ. ನಾಲ್ಕನೇ ಪಂದ್ಯ ಡಿಸೆಂಬರ್ 1 ರಂದು ರಾಯ್ಪುರದಲ್ಲಿ ನಡೆಯಲಿದ್ದು, ಐದನೇ ಮತ್ತು ಅಂತಿಮ ಪಂದ್ಯ ಡಿಸೆಂಬರ್ 3 ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ರಾಯ್ಪುರ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಎರಡು ಟಿ 20 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ಉಪನಾಯಕರಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಮೊದಲ ಮೂರು ಟಿ20 ಪಂದ್ಯಗಳಿಗೆ ಸೂರ್ಯಕುಮಾರ್ ಬದಲಿಗೆ ಋತುರಾಜ್ ಗಾಯಕ್ವಾಡ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ
ಸೂರ್ಯಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಇತ್ತೀಚಿನ ಸುದ್ದಿ

Exit mobile version