ಚಟ್ಟ ಏರಿ ಬಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿ!

ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ವಿಶಿಷ್ಟ ರೀತಿಯಲ್ಲಿ ಆಗಮಿಸಿ ಮತದಾರರನ್ನು ಸೆಳೆಯುವುದು ಸಾಮಾನ್ಯ. ಇಲ್ಲೊಬ್ಬರು ಅಭ್ಯರ್ಥಿ ಚಟ್ಟದಲ್ಲಿ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಉತ್ತರ ಪ್ರದೇಶದ ಗೋರಕ್ಪುರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜನ್ ಯಾದವ್, ಚಟ್ಟದಲ್ಲಿ ಬಂದು ತಮ್ಮ ನಾಮಪತ್ರ ಸಲ್ಲಿಸಿದರು.
ಇವರು ಈ ಭಾಗದಲ್ಲಿ ‘ಆರ್ತಿ ಬಾಬಾ’ ಎಂದೇ ಹೆಸರು ಪಡೆದುಕೊಂಡಿದ್ದಾರೆ. ಎಂಬಿಎ ಪದವೀಧರ ಎಂದು ಹೇಳಿಕೊಂಡಿರುವ ರಾಜನ್ ಯಾದವ್, ಬೌದ್ಧ ಬಿಕ್ಕು ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ತಾನು ಭಿಕ್ಷಾಟನೆ ಮಾಡಿ ಜೀವನ ನಡೆಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಅವರು ಈ ಹಿಂದೆಯೂ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಇವರು ಸ್ಮಶಾನದಲ್ಲೇ ತಮ್ಮ ಚುನಾವಣೆ ಕಚೇರಿ ಕೂಡ ತೆರೆದಿದ್ದಾರೆ. ತನ್ನನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ, ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಡುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೇ ಜನಸೇವೆ ಮಾಡಲು ಅವಿವಾಹಿತನಾಗಿಯೇ ಉಳಿಯುವುದಾಗಿ ಹೇಳಿಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97