ಉತ್ತರಪ್ರದೇಶದಲ್ಲಿ ಎನ್ ಡಿಎಗಿಂತ 41 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ ಇಂಡಿಯಾ ಮೈತ್ರಿಕೂಟ - Mahanayaka

ಉತ್ತರಪ್ರದೇಶದಲ್ಲಿ ಎನ್ ಡಿಎಗಿಂತ 41 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ ಇಂಡಿಯಾ ಮೈತ್ರಿಕೂಟ

04/06/2024

ಇಂದು ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಅಚ್ಚರಿಯ ಬೆಳವಣಿಗೆಗೆ ಕಾರಣವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟದ ಬಣವು ನಿರೀಕ್ಷೆಗಿಂತ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ ಎಂದು ಆರಂಭಿಕ ಫಲಿತಾಂಶಗಳು ತೋರಿಸಿದೆ. ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ 41ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರಂಭಿಕ ಪ್ರವೃತ್ತಿಯು ಮುಸ್ಲಿಂ-ಯಾದವ್ ಮತ್ತು ಒಬಿಸಿ ಮತಗಳ ಕ್ರೋಢೀಕರಣದ ಪರಿಣಾಮವಾಗಿರಬಹುದು.


Provided by

ಪಶ್ಚಿಮ ಯುಪಿಯ 29 ಸ್ಥಾನಗಳಲ್ಲಿ, ಸಮಾಜವಾದಿ ಪಕ್ಷ-ಕಾಂಗ್ರೆಸ್ ಮೈತ್ರಿಕೂಟವು 2024 ರ ಲೋಕಸಭಾ ಚುನಾವಣಾ ಫಲಿತಾಂಶದ ಆರಂಭಿಕ ಮುನ್ನಡೆಗಳಲ್ಲಿ ಪ್ರಾಬಲ್ಯ ಸಾಧಿಸಿದೆ.
ಎನ್ ಡಿಎ 2019 ರಲ್ಲಿ ಉತ್ತರ ಪ್ರದೇಶದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಜಯಂತ್ ಚೌಧರಿ ಅವರ ರಾಷ್ಟ್ರೀಯ ಲೋಕ ದಳ (ಆರ್ಎಲ್ಡಿ) ದೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ