‘ಲೋಕ’ ರಿಸಲ್ಟ್ ಅನೌನ್ಸ್ ಆದ 48 ಗಂಟೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಆಯ್ಕೆ: ಜೈರಾಮ್ ರಮೇಶ್ ಹೇಳಿಕೆ

30/05/2024

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
ಇಂಡಿಯಾ ಮೈತ್ರಿಕೂಟದಲ್ಲಿ ಗರಿಷ್ಠ ಸ್ಥಾನಗಳನ್ನು ಪಡೆಯುವ ಪಕ್ಷವು ಮೈತ್ರಿಕೂಟದ ನಾಯಕತ್ವಕ್ಕೆ “ನೈಸರ್ಗಿಕ ಹಕ್ಕುದಾರ” ಆಗಿರುತ್ತದೆ. ಇಂಡಿಯಾ ಮೈತ್ರಿಕೂಟ ಲೋಕಸಭೆಯಲ್ಲಿ ಬಹುಮತಕ್ಕೆ ಬೇಕಾದ 272 ಅಂಕಗಳಿಗಿಂತ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ.

ಇಂಡಿಯಾ ಮೈತ್ರಿಕೂಟವು ಬಹುಮತ ಪಡೆದಾಗ, ಕೆಲವು ಎನ್‌ಡಿಎ ಮೈತ್ರಿ ಪಕ್ಷಗಳು ಇಂಡಿಯಾ ಮೈತ್ರಿ ಕೂಟದ ಜೊತೆ ಸೇರಲು ಮುಂದೆ ಬರಬಹುದು, ಈ ವೇಳೆ ಮೈತ್ರಿಗೆ ಸೇರಿಸಬೇಕೇ ಅಥವಾ ಬೇಡವೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕು ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ.

ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರನ್ನು ಇಂಡಿಯಾ ಮೈತ್ರಿಕೂಟಕ್ಕೆ ಸೇರಿಸಲಾಗುತ್ತಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಜೈರಾಮ್‌ ರಮೇಶ್, ನಿತೀಶ್ ಕುಮಾರ್ ಪಲ್ಟಿ ರಾಜಕಾರಣಕ್ಕೆ ಯಾವಾಗಲೂ ಹೆಸರುವಾಸಿಯಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version