ಮೋದಿ ಸೋತರೆ ಮಾತ್ರ ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯ: ಸುಬ್ರಮಣಿಯನ್ ಸ್ವಾಮಿ ಹೇಳಿಕೆ

04/03/2024

ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಮತ್ತೆ ಭೋಪಾಲ್‌ನಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲ. ಆರ್‌ಎಸ್‌ಎಸ್ ಅನ್ನು ಟೀಕಿಸಿದ ವ್ಯಕ್ತಿಗೆ ಅವಕಾಶ ನೀಡಲಾಗಿದೆ ಎಂದು ವ್ಯಕ್ತಿಯೊಬ್ಬರು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ, ವಾರಣಾಸಿಯಲ್ಲಿ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗುವುದು ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತಪ್ಪುಗಳನ್ನು ಕಟುವಾಗಿಯೇ ಟೀಕಿಸುವ ಸುಬ್ರಮಣಿಯನ್ ಸ್ವಾಮಿ, ಬಿಜೆಪಿಗರಿಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ.
ಹಿಂದೂ ಹೆಮ್ಮೆಯ ಉಲ್ಬಣವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಿದ್ದು ಮೋದಿ ಮೋಡಿಯಿಂದ ಅಲ್ಲ ಎಂದು ಟೀಕಿಸಿದ್ದ ಬಿಜೆಪಿಯ ಹಿರಿಯ ನಾಯಕ ಮತ್ತೊಮ್ಮೆ ಪ್ರಧಾನಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version