ಭಾರತ–ಚೀನಾ ಗಡಿ ಘರ್ಷಣೆ: ರಾಜ್ಯಸಭೆಯಲ್ಲಿ ಚರ್ಚೆಗೆ ಸಿಗಲಿಲ್ಲ ಅವಕಾಶ!
ಭಾರತ-ಚೀನಾ ಗಡಿ ಘರ್ಷಣೆ ಕುರಿತು ರಾಜ್ಯಸಭೆಯಲ್ಲಿ ಚರ್ಚೆಗೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸೋಮವಾರ ಸದನದಿಂದ ಹೊರ ನಡೆದು ಪ್ರತಿಭಟಿಸಿವೆ.
ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾದಿಂದ ಆಗಿರುವ ಅತಿಕ್ರಮಣದ ವಿಷಯವನ್ನು ಚರ್ಚೆ ಮಾಡಬೇಕು ಎಂದು ಸದಸ್ಯರು ನಿಲುವಳಿ ಸೂಚನೆ ಮಂಡಿಸಿದರು. ಆದರೆ, ವಿಚಾರದ ಚರ್ಚೆಗೆ ರಾಜ್ಯಸಭೆಯಲ್ಲಿ ಅವಕಾಶ ನಿರಾಕರಿಸಲಾಯಿತು.
ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಚೀನಾ ನಮ್ಮ ಭೂಮಿಯನ್ನು ಅತಿಕ್ರಮಿಸುತ್ತಿದ್ದಾರೆ. ನಾವು ಈ ವಿಷಯವನ್ನು ಚರ್ಚಿಸದಿದ್ದರೆ ಇನ್ನೇನು ಚರ್ಚಿಸಬೇಕು? ಎಂದು ಪ್ರಶ್ನಿಸಿದರು. ಆದರೆ, ಚರ್ಚೆಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಕಲಾಪ ಬಹಿಷ್ಕರಿಸಿ ಸದನದಿಂದ ಹೊರ ನಡೆದು ಪ್ರತಿಭಟನೆ ನಡೆಸಿದವು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka