ಇಂಡಿಯಾ ಫ್ರೆಂಡ್… ಹೆಚ್ಚುವರಿ ದಂಡದೊಂದಿಗೆ 25% ಸುಂಕ ವಿಧಿಸುತ್ತೇನೆ: ಟ್ರಂಪ್

ಭಾರತದ ಆಮದಿನ ಮೇಲೆ ಹೆಚ್ಚುವರಿ ದಂಡದೊಂದಿಗೆ 25% ಸುಂಕವನ್ನು ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದು, ಆಗಸ್ಟ್ 1ರಿಂದಲೇ ಈ ಸುಂಕ ಮತ್ತು ದಂಡ ಜಾರಿಗೆ ಬರಲಿದೆ ಎಂದು ಅವರು ಹೇಳಿದ್ದಾರೆ.
ಟ್ರೂತ್ ಸೋಶಿಯಲ್ ವೇದಿಕೆಯಲ್ಲಿನ ಪೋಸ್ಟ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ಇಂಡಿಯಾ ಫ್ರೆಂಡ್ ಆದರೂ, ಭಾರತ ಅತಿಯಾದ ಸುಂಕ ವಿಧಿಸುತ್ತದೆ. ಎರಡೂ ದೇಶಗಳ ಸಂಬಂಧ ವ್ಯಾಪಾರ ಸಂಬಂಧಕ್ಕೆ ಸೀಮಿತವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.
ನೆನಪಿಡಿ, ಭಾರತ ನಮ್ಮ ಸ್ನೇಹಿತನಾಗಿದ್ದರೂ, ನಾವು ವರ್ಷಗಳಲ್ಲಿ ಅವರೊಂದಿಗೆ ತುಲನಾತ್ಮಕವಾಗಿ ಕಡಿಮೆ ವ್ಯವಹಾರ ಮಾಡಿದ್ದೇವೆ ಏಕೆಂದರೆ ಅವರ ಸುಂಕಗಳು ತುಂಬಾ ಹೆಚ್ಚಿವೆ. ವಿಶ್ವದ ಅತ್ಯಧಿಕ – ಮತ್ತು ಅವರು ಯಾವುದೇ ದೇಶಕ್ಕಿಂತ ಅತ್ಯಂತ ಕಠಿಣ ಮತ್ತು ಅಸಹ್ಯಕರ ವಿತ್ತೀಯವಲ್ಲದ ವ್ಯಾಪಾರ ಅಡೆತಡೆಗಳನ್ನು ಹೊಂದಿದ್ದಾರೆ” ಎಂದು ಟ್ರಂಪ್ ಬರೆದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD