ಜೀವ ವಿಮೆ ಮೇಲೆ ಹೆಚ್ಚುವರಿ ಜಿಎಸ್ ಟಿ: ಲೋಕಸಭೆಯಲ್ಲಿ ‘ಇಂಡಿಯಾ’ ಪ್ರತಿಭಟನೆ

ಜೀವ ವಿಮೆ ಹಾಗೂ ಆರೋಗ್ಯ ವಿಮೆ ಕಂತುಗಳ ಮೇಲೆ ಶೇಕಡಾ 18ರಷ್ಟು ಜಿಎಸ್ ಟಿ ವಿಧಿಸಿರುವುದನ್ನು ವಿರೋಧಿಸಿ ಮಂಗಳವಾರ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದವು.”ತೆರಿಗೆ ಭಯೋತ್ಪಾದನೆ” ಎಂಬ ಭಿತ್ತಿ ಫಲಕ ಹಿಡಿದು ಸಂಸದರು, ಜೀವ ವಿಮೆ ಹಾಗೂ ಆರೋಗ್ಯ ವಿಮೆ ಮೇಲೆ ವಿಧಿಸಲಾಗಿರುವ ಜಿಎಸ್ಟಿಳಯನ್ನು ಹಿಂಪಡೆಯಬೇಕು ಎಂದು ಘೋಷಣೆ ಕೂಗಿದರು.
ಲೋಕಸಭೆಯ ಮಕರ ದ್ವಾರದೆಡೆಗಿನ ಮಾರ್ಗದಲ್ಲಿ ಟಿಎಂಸಿ, ಕಾಂಗ್ರೆಸ್, ಆಪ್ ಹಾಗೂ ಎನ್ಸಿಪಿ (ಎಸ್ಸಿ) ಸೇರಿದಂತೆ ಹಲವಾರು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡವು.
ಈ ವಿಷಯದ ಕುರಿತು ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದರು ಲೋಕಸಭೆಯಲ್ಲಿ ಪ್ರಸ್ತಾಪಿಸಿದರು ಹಾಗೂ ಈ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.
ಜೀವ ವಿಮೆ ಹಾಗೂ ಆರೋಗ್ಯ ವಿಮೆಯ ಮೇಲೆ ಜಿಎಸ್ಟಿ ವಿಧಿಸುವುದರಿಂದ ಈ ಉದ್ಯಮ ವಲಯದ ಬೆಳವಣಿಗೆಗೆ ತೊಡಕುಂಟಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಕೂಡಾ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth