ಮತ್ತೊಮ್ಮೆ ಭಾರತೀಯರ ಹೃದಯ ಗೆದ್ದ ಇರಾನ್: ಭಾರತೀಯ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಸಂಚಾರಕ್ಕೆ ಅನುಮತಿ
ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಸಮುದ್ರ ಮಾರ್ಗಗಳಲ್ಲಿ ವ್ಯಾಪಾರ ಹಡಗುಗಳ ಮೇಲೆ ದಾಳಿ ನಡೆಯುವ ಆತಂಕ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ತಮ್ಮ ಇರಾನ್ ಸಹವರ್ತಿಯೊಂದಿಗೆ ಮಾತುಕತೆ ನಡೆಸಿದ ನಂತರ, ಇರಾನ್ ಭಾರತೀಯ ಹಡಗುಗಳಿಗೆ ‘ಸುರಕ್ಷಿತ ಹಾದಿ’ಯನ್ನು ನೀಡಲು ಒಪ್ಪಿಕೊಂಡಿದೆ.
ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವರೊಂದಿಗೆ ದೂರವಾಣಿ ಕರೆ ಮೂಲಕ ಚರ್ಚಿಸಿದ್ದು, ಸಮುದ್ರ ಮಾರ್ಗದಲ್ಲಿ ಭಾರತೀಯ ವ್ಯಾಪಾರ ಮತ್ತು ಹಡಗುಗಳ ಸುರಕ್ಷಿತ ಸಂಚಾರಕ್ಕೆ ಇರಾನ್ ಅನುಮತಿ ನೀಡಿದೆ.
ವಿಶ್ವದ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯ ಮೂಲಕ ಭಾರತಕ್ಕೆ ಹೆಚ್ಚಿನ ಪ್ರಮಾಣದ ಕಚ್ಚಾ ತೈಲ ಪೂರೈಕೆಯಾಗುತ್ತದೆ. ಈ ಮಾರ್ಗದಲ್ಲಿ ಭಾರತೀಯ ಟ್ಯಾಂಕರ್ ಗಳಿಗೆ ಯಾವುದೇ ಅಡೆತಡೆ ಇಲ್ಲದೆ ಸಂಚರಿಸಲು ಇರಾನ್ ಈಗ ಅವಕಾಶ ನೀಡಿದೆ.
ಇರಾನ್ ನ ಈ ನಿರ್ಧಾರದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಪೂರೈಕೆ ವ್ಯತ್ಯಯವಾಗುವ ಭೀತಿ ಕಡಿಮೆಯಾಗಿದೆ. ಇದು ಭಾರತದಲ್ಲಿ ತೈಲ ಬೆಲೆಗಳು ಸ್ಥಿರವಾಗಿರಲು ಸಹಕಾರಿಯಾಗಲಿದೆ.
ಸಂಘರ್ಷದ ಸಂದರ್ಭದಲ್ಲಿ ಭಾರತವು ಶಾಂತಿ ಮತ್ತು ಮಾತುಕತೆಗೆ ಒತ್ತು ನೀಡುತ್ತಾ ಬಂದಿದ್ದು, ಇರಾನ್ ಜೊತೆಗಿನ ಉತ್ತಮ ಬಾಂಧವ್ಯವು ಈಗ ಭಾರತೀಯ ಹಿತಾಸಕ್ತಿಗಳನ್ನು ರಕ್ಷಿಸಲು ನೆರವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























