ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯ ಹೊಸ ಆವೃತ್ತಿಯ ಯಶಸ್ವಿ ಪರೀಕ್ಷೆ

ನವದೆಹಲಿ: ಒಡಿಶಾದ ಬಾಲಸೋರ್‌ನ ಕರಾವಳಿಯಲ್ಲಿ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯ ಹೊಸ ಆವೃತ್ತಿಯನ್ನು ಗುರುವಾರ ಭಾರತವು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ರಕ್ಷಣಾ ಮೂಲಗಳ ಪ್ರಕಾರ, ಕ್ಷಿಪಣಿಯು ಹೊಸ ತಾಂತ್ರಿಕ ಬೆಳವಣಿಗೆಗಳನ್ನು ಹೊಂದಿದ್ದು, ಯಶಸ್ವಿಯಾಗಿ ಸಾಬೀತಾಗಿದೆ. ಇದಕ್ಕೂ ಮುನ್ನ ಜನವರಿ 11 ರಂದು ಭಾರತ ನೌಕಾಪಡೆಯ ಐಎನ್‌ಎಸ್ ವಿಶಾಖಪಟ್ಟಣಂ ಯುದ್ಧನೌಕೆಯಿಂದ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿತ್ತು.
ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಇಂದು ಐಎನ್ಎಸ್ ವಿಶಾಖಪಟ್ಟಣದಿಂದ ಪರೀಕ್ಷಿಸಲಾಯಿತು. ಕ್ಷಿಪಣಿಯು ಗೊತ್ತುಪಡಿಸಿದ ಗುರಿ ಹಡಗನ್ನು ನಿಖರವಾಗಿ ಹೊಡೆದಿದೆ ಎಂದು ಡಿಆರ್‌ಡಿಒ ಅಧಿಕಾರಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಂಟ್ವಾಳ: ಡೆತ್ ನೋಟು ಬರೆದಿಟ್ಟು ಪಟ್ಟಣ ಪಂಚಾಯತ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ
ಅಫ್ಘಾನಿಸ್ತಾನ: ಗುಂಡಿನ ದಾಳಿಗೆ ತಾಲಿಬಾನ್ ಕಮಾಂಡರ್, ಆತನ ಪುತ್ರ ಸೇರಿ 6 ಮಂದಿ ಸಾವು
ಗ್ರಾಹಕನ ಮುಖ ಕೆಂಪಗಾಗಿಸಿದ ವೀಳ್ಯದೆಲೆ: ಒಂದು ಕಟ್ಟು ವೀಳ್ಯದೆಲೆಗೆ 150 ರೂ.!
ಯಕ್ಷಗಾನ ಮುಗಿಸಿ ಮನೆಗೆ ತೆರಳುತ್ತಿದ್ದ ಕಲಾವಿದ ರಸ್ತೆ ಅಪಘಾತಕ್ಕೆ ಬಲಿ
ಕಿರಾತಕ ಚಿತ್ರದ ನಿರ್ದೇಶಕ, 46 ವರ್ಷದ ವಯಸ್ಸಿನ ಪ್ರದೀಪ್ ರಾಜ್ ನಿಧನ