ಫೆಲೆಸ್ತೀನ್ ನಲ್ಲಿ ಇಸ್ರೇಲಿ ಆಕ್ರಮಣಗಳನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಬೆಂಬಲ

12/11/2023

ಫೆಲೆಸ್ತೀನ್ ನಲ್ಲಿ ಇಸ್ರೇಲಿ ಆಕ್ರಮಣಗಳನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ. ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಫೆಲೆಸ್ತೀನ್ ಪ್ರದೇಶ ಮತ್ತು ಆಕ್ರಮಿತ ಸಿರಿಯನ್ ಗೋಲನ್ ನಲ್ಲಿ ಆಕ್ರಮಣದ ಚಟುವಟಿಕೆಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಲಾಯಿತು. ಇದನ್ನು ವಿರೋಧಿಸಿದ ಏಳು ದೇಶಗಳಲ್ಲಿ ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ ಸೇರಿವೆ. ಹದಿನೆಂಟು ದೇಶಗಳು ಮತದಾನದಿಂದ ದೂರ ಉಳಿದವು.

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ “ತಕ್ಷಣದ ಮಾನವೀಯ ಕದನ ವಿರಾಮ”ಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ನಿರ್ಣಯದ ಮೇಲಿನ ಮತದಾನದಿಂದ ಭಾರತ ದೂರ ಉಳಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ನಡೆದ ದಾಳಿಯಿಂದ ಪ್ರಚೋದಿಸಲ್ಪಟ್ಟ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವು ಗಾಝಾದಲ್ಲಿ 11,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. ಹಮಾಸ್ ದಾಳಿಯಲ್ಲಿ ಸುಮಾರು 1,200 ಇಸ್ರೇಲಿಗಳು ಕೊಲ್ಲಲ್ಪಟ್ಟಿದ್ದಾರೆ. 200 ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ತೆಗೆದುಕೊಳ್ಳಲಾಯಿತು.

ಹಿಂದಿನ ಮತದಾನದಿಂದ ದೂರ ಉಳಿಯುವ ನಿರ್ಧಾರವನ್ನು ವಿವರಿಸಿದ ಸರ್ಕಾರದ ಮೂಲಗಳು, ಗಾಝಾದಲ್ಲಿ ತೆರೆದುಕೊಳ್ಳುತ್ತಿರುವ ಮಾನವೀಯ ಬಿಕ್ಕಟ್ಟಿನ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ..
“ಯುಎನ್ಜಿಎಯಲ್ಲಿನ ನಿರ್ಣಯವು ಅಕ್ಟೋಬರ್ 7 ರ ಭಯೋತ್ಪಾದಕ ದಾಳಿಯ ಬಗ್ಗೆ ಯಾವುದೇ ಸ್ಪಷ್ಟ ಖಂಡನೆಯನ್ನು ಒಳಗೊಂಡಿಲ್ಲ. ಮುಖ್ಯ ನಿರ್ಣಯದ ಮೇಲಿನ ಮತದಾನಕ್ಕೆ ಮೊದಲು ಈ ಅಂಶವನ್ನು ಸೇರಿಸಲು ತಿದ್ದುಪಡಿಯನ್ನು ಮಂಡಿಸಲಾಯಿತು” ಎಂದು ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ.

ಇತ್ತೀಚಿನ ಸುದ್ದಿ

Exit mobile version