ಪಾಕಿಸ್ತಾನಕ್ಕೆ ಭಾರೀ ಹಿನ್ನಡೆ: ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸ ಮಾಡಿದ ಭಾರತೀಯ ಸೇನೆ

india pak war
08/05/2025

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಿದ್ದ ಕ್ಷಿಪಣಿ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.

ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್–400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ. ಈ ಬಗ್ಗೆ ಭಾರತೀಯ ಸೇನೆ ಅಧಿಕೃತ ಮಾಹಿತಿ ಪ್ರಕಟಿಸಿದ್ದು ದಾಳಿಯನ್ನು ಖಚಿತಪಡಿಸಿದೆ.

ಪಾಕಿಸ್ತಾನ ಚೀನಾದಿಂದ HQ–9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ಪಡೆದಿತ್ತು. ಈಗ ಈ ವ್ಯವಸ್ಥೆಯನ್ನು ಭಾರತ ಸಂಪೂರ್ಣ ನಾಶ ಮಾಡಿದೆ. ದಾಳಿಯನ್ನು ಪಾಕಿಸ್ತಾನ ಸಹ ಖಚಿತಪಡಿಸಿದ್ದು, ದಾಳಿಯಲ್ಲಿ ನಾಲ್ವರು ಪಾಕಿಸ್ತಾನದ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ನೆನ್ನೆ ರಾತ್ರಿ ಪಾಕಿಸ್ತಾನ ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಯತ್ನಿಸಿತ್ತು ಈ ದಾಳಿಯನ್ನು ಭಾರತ 9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ನಾಶ ಮಾಡುವ ಮೂಲಕ ತಡೆಗಟ್ಟಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version