7:27 PM Thursday 23 - October 2025

ಇಂಡಿಯನ್​ ಬ್ಯಾಂಕ್​ ನಲ್ಲಿದೆ ಉದ್ಯೋಗಾವಕಾಶ!: ಅರ್ಜಿ ಸಲ್ಲಿಸುವುದು ಹೇಗೆ?

indian bank
27/07/2025

ಬೆಂಗಳೂರು: ಇಂಡಿಯನ್​ ಬ್ಯಾಂಕ್​ ನಲ್ಲಿ ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1,500 ಅಪ್ರೆಂಟಿಸ್​ ಹುದ್ದೆಗಳಿದ್ದು, 42 ಹುದ್ದೆಗಳನ್ನು ಕರ್ನಾಟಕಕ್ಕೆ ಮೀಸಲಿಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಶಿಕ್ಷಣ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 12,000 ರೂ.ಗಳಿಂದ 15,000 ರೂ. ವರೆಗೆ ಗೌರವಧನ ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ ​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 175 ರೂ., ಸಾಮಾನ್ಯ, ಒಬಿಸಿ,, ಇಡಬ್ಲ್ಯೂಸಿ ಅಭ್ಯರ್ಥಿಗಳಿಗೆ 800 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.  ಈ ಹುದ್ದೆಗಳಿಗೆ ಜುಲೈ 18 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್​ 7 ಕೊನೆಯ ದಿನಾಂಕವಾಗಿದೆ.

ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಸೂಚನೆ ಸಂಬಂಧ ಅಭ್ಯರ್ಥಿಗಳು indianbank.in ಭೇಟಿ ನೀಡಬಹುದಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version