ಕಾರು ಅಪಘಾತದಲ್ಲಿ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಸ್ಥಿತಿ ಗಂಭೀರ: ಸುಟ್ಟು ಕರಕಲಾದ ಕಾರು - Mahanayaka
1:24 AM Tuesday 16 - December 2025

ಕಾರು ಅಪಘಾತದಲ್ಲಿ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಸ್ಥಿತಿ ಗಂಭೀರ: ಸುಟ್ಟು ಕರಕಲಾದ ಕಾರು

rishab panth
30/12/2022

ಭಾರತ ಕ್ರಿಕೆಟ್ ತಂಡದ ಖ್ಯಾತ ಆಟಗಾರ ರಿಷಬ್ ಪಂತ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ರಿಷಬ್ ಪಂತ್  ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರಾಖಂಡ್ ನ ರೂರ್ಕಿಯ ನರ್ಸನ್ ಗಡಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.  ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಹೊತ್ತಿ ಉರಿದು ಹೋಗಿದೆ. ದುರ್ಘಟನೆಯಲ್ಲಿ ರಿಷಬ್ ಪಂತ್ ಅವರ ತಲೆ, ಕಾಲು ಹಾಗೂ ಬೆನ್ನಿಗೆ ಗಂಭೀರವಾದ ಗಾಯಗಳಾಗಿವೆ.

ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಆಗಿರುವ ರಿಷಬ್ ಪಂತ್ ಕಾರು ಅಪಘಾತಕ್ಕೀಡಾದ ಕಾರಾಗಿದ್ದು,  ಬೆಳಗ್ಗಿನ ಜಾವ 5:15ರ ವೇಳೆಗೆ ಈ ದುರ್ಘಟನೆ ನಡೆದಿದೆ. ಅತೀಯಾದ ಮಂಜು ಕವಿದ ವಾತಾವರಣದಿಂದ ಅಪಘಾತ ಸಂಭವಿಸಿದೆ ಎಂದು ಸದ್ಯ ಮಾಹಿತಿ ದೊರಕಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ