ಭಾರತೀಯ ನೌಕಾಪಡೆಯಲ್ಲಿ ಪಿಯುಸಿ ಮುಗಿಸಿದವರಿಗೆ ಭರ್ಜರಿ ಉದ್ಯೋಗಾವಕಾಶ
Indian Navy Recruitment 2024 – ಭಾರತೀಯ ನೌಕಾಪಡೆಯಲ್ಲಿ ದ್ವಿತೀಯ ಪಿಯುಸಿ ಪಾಸಾದವರಿಗೆ ಟೆಕ್ನಿಕಲ್ ವಿಭಾಗದಲ್ಲಿ ಟೆಕ್ ಕೆಡೆಟ್ ಎಂಟ್ರಿ ಸ್ಕೀಮ್ ನ ಅಡಿಯಲ್ಲಿ ಪರ್ಮನೆಂಟ್ ಕಮಿಷನ್ಡ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲು ಚಾಲನೆ ನೀಡಲಾಗಿದೆ.
ಸದ್ಯಕ್ಕೆ ಈಗಿನ ನೇಮಕಾತಿಯಲ್ಲಿ 36 ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 6ರಿಂದ 20ರವರೆಗೆ ಅವಕಾಶ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆ ಹೇಗಿರಲಿದೆ? ಅರ್ಜಿ ಹೇಗೆ ಸಲ್ಲಿಸುವುದು? ಅರ್ಜಿಯನ್ನು ಯಾರು ಸಲ್ಲಿಸಬಹುದು ಎಂಬ ಮಾಹಿತಿ ಇಲ್ಲಿದೆ..
ಅರ್ಹತೆಗಳು :
ಈ ನೇಮಕಾತಿಗೆ ಪುರುಷರ ಸೇರಿದಂತೆ ಮಹಿಳೆಯರು ಕೂಡ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪ್ರಮುಖವಾಗಿ ವಿಜ್ಞಾನ ವಿಷಯದಲ್ಲಿ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಜೊತೆಗೆ ಅಂಕಗಳನ್ನು ಪಡೆದು ಪಾಸ್ ಆಗಿರಬೇಕು. ನಂತರದಲ್ಲಿ 2024ರ JEE ಮುಖ್ಯ ಪರೀಕ್ಷೆಯಲ್ಲಿ ಪಾಸ್ ಆಗಿರುವುದು ಕಡ್ಡಾಯವಾಗಿರುತ್ತದೆ.
ವಯೋಮಿತಿ ಅರ್ಹತೆ ನೋಡುವುದಾದರೆ ಅರ್ಜಿ ಸಲ್ಲಿಸುವಂತವರು 2006ರ ಜನವರಿ 2 ಮತ್ತು 2008ರ ಜುಲೈ 1ರ ನಡುವೆ ಜನಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಆಯ್ಕೆ ಪ್ರಕ್ರಿಯೆ ವಿವರ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಅರ್ಹರನ್ನು ಆಯ್ಕೆ ಮಾಡಿ ಸಂದರ್ಶನಕ್ಕೆ ಕರೆಯಲಾಗುವುದು. ಇದರಲ್ಲಿ ಆಯ್ಕೆ ಆಗುವಂತಹ ಅಭ್ಯರ್ಥಿಗಳಿಗೆ ನಾಲ್ಕು ವರ್ಷಗಳ ಬಿ . ಟೆಕ್ ಕೆಡೆಟ್ ಪದವಿ ಕೋರ್ಸ್ ಅನ್ನು ಪ್ರಧಾನ ಮಾಡಲಾಗುತ್ತದೆ. ನಂತರದಲ್ಲಿ ಅಭ್ಯರ್ಥಿಗಳನ್ನು ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು.
ಅರ್ಜಿ ಹೇಗೆ ಸಲ್ಲಿಸಬೇಕು?
ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
Apply Online link: www.joinindiannavy.gov.in
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: