3:30 PM Friday 19 - September 2025

ಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ವ್ಯಕ್ತಿ ಪೊಲೀಸರ ಗುಂಡೇಟಿಗೆ ಬಲಿ

mohammed nizamuddin
19/09/2025

ಹೈದರಾಬಾದ್: ಕ್ಯಾಲಿಫೋರ್ನಿಯಾದಲ್ಲಿ 30 ವರ್ಷದ ಭಾರತೀಯ ವ್ಯಕ್ತಿಯೊಬ್ಬರು ಪೊಲೀಸರ ಗುಂಡೇಟಿಗೆ ಬಲಿಯಾಗಿರುವ ಘಟನೆ ನಡೆದಿದ್ದು, ತನ್ನ ರೂಮ್ ಮೇಟ್ ಮೇಲೆ ಚಾಕುವಿನಿಂದ ದಾಳಿ ನಡೆಸಲು ಮುಂದಾದ ವೇಳೆ ಗುಂಡಿಕ್ಕಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣದ ಮೆಹಬೂಬ್ ನಗರದ ಮೊಹಮ್ಮದ್ ನಿಜಾಮುದ್ದೀನ್(Mohammed Nizamuddin) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈ ಘಟನೆ  ಸೆಪ್ಟಂಬರ್ 3ರಂದು ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಮೊಹಮ್ಮದ್ ನಿಜಾಮುದ್ದೀನ್ ತಂದೆ ಭಾರತದ ವಿದೇಶಾಂಗ ಸಚಿವರಿಗೆ ಪತ್ರ ಬರೆದಿದ್ದು, ತಮ್ಮ ಮಗನ ಮೃತದೇಹ ಭಾರತಕ್ಕೆ ತರುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ಜನಾಂಗೀಯ ತಾರತಮ್ಯದಿಂದ ಈ ಕೊಲೆ ನಡೆದಿರಬಹುದು ಎಂದು ಅವರು ಶಂಕಿಸಿದ್ದಾರೆ.

ನನ್ನ ಮಗ ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ಹೋಗಿದ್ದ, ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ವಾಸಿಸುತ್ತಿದ್ದ ಎಂದು ಅವರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version