ಚೀನಾದ ಓಲೈಕೆಗೆ ಮುಂದಾಗಿದ್ದ ಬಾಂಗ್ಲಾದೇಶಕ್ಕೆ ಭಾರತ ತಕ್ಕ ಉತ್ತರ! - Mahanayaka

ಚೀನಾದ ಓಲೈಕೆಗೆ ಮುಂದಾಗಿದ್ದ ಬಾಂಗ್ಲಾದೇಶಕ್ಕೆ ಭಾರತ ತಕ್ಕ ಉತ್ತರ!

pm modi muhammad yunus
09/04/2025

ನವದೆಹಲಿ: ಬಾಂಗ್ಲಾದೇಶದಿಂದ ರಫ್ತು ಸರಕುಗಳಿಗೆ ಟ್ರಾನ್ಸ್‌ ಶಿಪ್‌ ಮೆಂಟ್ ಸೌಲಭ್ಯಗಳನ್ನು ಭಾರತ ರದ್ದುಗೊಳಿಸಿದೆ. ಈ ಮೂಲಕ ಚೀನಾದ ಓಲೈಕೆಯಲ್ಲಿ ತೊಡಗಿರುವ ಬಾಂಗ್ಲಾದೇಶಕ್ಕೆ ಭಾರತ ತಕ್ಕ ಉತ್ತರ ನೀಡಿದೆ.


Provided by

ಚೀನಾ ಪ್ರವಾಸ ಕೈಗೊಂಡಿದ್ದ ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮಹಮ್ಮದ್ ಯೂನಸ್, ಭಾರತದ ಈಶಾನ್ಯ ಭಾಗದಲ್ಲಿರುವ 7 ರಾಜ್ಯಗಳು ಬಾಂಗ್ಲಾದೇಶದಿಂದಲೇ ಸುತ್ತುವರೆದಿವೆ. ಆ ಭಾಗದಲ್ಲಿ ಚೀನಾ ತನ್ನ ಪ್ರಭಾವ ವಿಸ್ತರಿಸಬೇಕೆಂಬುದು ನಮ್ಮ ಬಯಕೆ ಎಂದು ಹೇಳಿಕೆ ನೀಡಿದ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ.

ಭಾರತ ಬಾಂಗ್ಲಾದೇಶದ ರಫ್ತು ಸರಕುಗಳನ್ನು ಭಾರತೀಯ ಭೂ ಕಸ್ಟಮ್ಸ್ ಸ್ಟೇಷನ್‌ಗಳು (LCS ಗಳು), ಬಂದರುಗಳು ಮತ್ತು ವಿಮಾನ ನಿಲ್ದಾಣಗಳ ಮೂಲಕ ಮೂರನೇ ದೇಶಗಳಿಗೆ ಸಾಗಿಸಲು ಅವಕಾಶ ಮಾಡಿಕೊಟ್ಟಿತ್ತು. ಇದೀಗ ಭಾರತ ಆ ಸೌಲಭ್ಯವನ್ನು ರದ್ದುಪಡಿಸುವ ಮೂಲಕ ತಕ್ಕ ಉತ್ತರ ನೀಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ