ಭಾರತದಲ್ಲಿ ಗಣರಾಜ್ಯೋತ್ಸವ: ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ ಆಗಮನ ಸಾಧ್ಯತೆ - Mahanayaka

ಭಾರತದಲ್ಲಿ ಗಣರಾಜ್ಯೋತ್ಸವ: ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ ಆಗಮನ ಸಾಧ್ಯತೆ

12/01/2025

ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಮುಂಬರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿ ತಿಳಿಸಿದೆ. ಈ ಬಗ್ಗೆ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ.

73 ವರ್ಷದ ಮಾಜಿ ಸೇನಾ ಜನರಲ್ ಸುಬಿಯಾಂಟೊ 2024 ರ ಅಕ್ಟೋಬರ್ ನಲ್ಲಿ ಇಂಡೋನೇಷ್ಯಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಈ ಭೇಟಿಯ ಸಮಯದಲ್ಲಿ, ರಾಷ್ಟ್ರಪತಿಗಳು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕಳೆದ ವರ್ಷ ಜೂನ್ ನಲ್ಲಿ ಪ್ರಧಾನಿಗೆ ಸುಬಿಯಾಂಟೊ ಅವರಿಂದ ಕರೆ ಬಂದಿತ್ತು. ಈ ಸಂದರ್ಭದಲ್ಲಿ ಉಭಯ ನಾಯಕರು ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ