ಇಂದು ಪುನೀತ್ ನಮನ: ಸ್ಟಾರ್ ನಟರು ಭಾಗಿಯಾಗುವ ಸಾಧ್ಯತೆ | ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ! - Mahanayaka

ಇಂದು ಪುನೀತ್ ನಮನ: ಸ್ಟಾರ್ ನಟರು ಭಾಗಿಯಾಗುವ ಸಾಧ್ಯತೆ | ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ!

puneeth rajkumar
16/11/2021


Provided by

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಇಂದು ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ನೇತೃತ್ವದಲ್ಲಿ  ಅರಮನೆ ಮೈದಾನದಲ್ಲಿ  ಪುನೀತ್ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದರೆ, ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರವೇ ಎಂಟ್ರಿ ಸಿಗಲಿದೆ.


Provided by

ಕಾರ್ಯಕ್ರಮದಲ್ಲಿ ಕನ್ನಡ, ತೆಲುಗು, ತಮಿಳು, ಮಲೆಯಾಳ ಮತ್ತು ಹಿಂದಿ ಚಿತ್ರರಂಗದ ಅನೇಕ ಗಣ್ಯರು ಹಾಜರಾಗುವ ನಿರೀಕ್ಷೆ ಇದೆ. ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಲಿದೆ.  ಡಾ.ವಿ.ನಾಗೇಂದ್ರ ಪ್ರಸಾದ್ ಹಾಗೂ ಗುರುಕಿರಣ್ ತಂಡದಿಂದ ಗೀತ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭವಾಗಲಿದೆ.

ಪುನೀತ್ ರಾಜ್ ಕುಮಾರ್ ಕುಟುಂಬಸ್ಥರು ನಡೆಸಿದ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ಜನ ಸಾಮಾನ್ಯ ಕೂಡ ಭಾಗವಹಿಸಿ, ನಮನ ಸಲ್ಲಿಸಿ ಹೋಗಬಹುದಿತ್ತು. ಆದರೆ, ವಾಣಿಜ್ಯ ಮಂಡಳಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೇವಲ 2 ಸಾವಿರ ಜನರಿಗಷ್ಟೆ ಭಾಗವಹಿಸಲು ಅವಕಾಶ ನೀಡಲಾಗಿದೆ.


Provided by

ಇನ್ನೂ ಚಿತ್ರರಂಗದಿಂದಲೇ 26 ಸಾವಿರಕ್ಕೂ ಅಧಿಕ ಪಾಸ್ ಗಳಿಗೆ ಬೇಡಿಕೆ ಬಂದಿದೆ ಎನ್ನಲಾಗಿದೆ.  ಆದರೆ, ಕೇವಲ 2 ಸಾವಿರ ಮಂದಿಗಷ್ಟೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸರ್ಕಾರ ಕೂಡ ಅವಕಾಶ ನೀಡಿದ್ದು, ಹಾಗಾಗಿ ನಿಯಮ ಮೀರುವಂತಿಲ್ಲ ಎಂದು ವಾಣಿಜ್ಯ ಮಂಡಳಿ ಸ್ಪಷ್ಟಪಡಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಶರಣ್ ಪಂಪ್ ವೆಲ್ ಗೆ ಮುಸ್ಲಿಮ್ ಸಂಸ್ಥೆಗಳ ಗುತ್ತಿಗೆಯ ಹಣ ಆಗುತ್ತದೆ, ಮುಸ್ಲಿಮರು ಆಗುವುದಿಲ್ಲ | ತರಾಟೆಗೆತ್ತಿಕೊಂಡ ಬಿರುವೆರ್ ಕುಡ್ಲ

ಕಂಗನಾ ಹೇಳಿದ್ದನ್ನು ಮುಸ್ಲಿಮ್ ವ್ಯಕ್ತಿ ಹೇಳಿದ್ದರೆ, ಮೊಣಕಾಲಿಗೆ ಗುಂಡಿಟ್ಟು ಜೈಲಿಗಟ್ಟಲಾಗುತ್ತಿತ್ತು | ಓವೈಸಿ

ಸತ್ಯದಪ್ಪೆ ಬೊಲ್ಲೆಯ ನೀರ ಮದುವೆ: ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 06

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು: ದಂಪತಿಯ ದಾರುಣ ಸಾವು

ಪತ್ನಿಯ ಕಣ್ಣೆದುರೇ ಆರೆಸ್ಸೆಸ್ ಕಾರ್ಯಕರ್ತನನ್ನು ಕೊಚ್ಚಿ ಬರ್ಬರ ಹತ್ಯೆ!

ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು | ಕ್ಷಮೆಯಾಚಿಸಿದ ಹಂಸಲೇಖ

ಇತ್ತೀಚಿನ ಸುದ್ದಿ