ಅಕ್ರಮವಾಗಿ ಗಡಿ ನುಗ್ಗಲು ಯತ್ನ: ನುಸುಳುಕೋರನ ಹತ್ಯೆ - Mahanayaka

ಅಕ್ರಮವಾಗಿ ಗಡಿ ನುಗ್ಗಲು ಯತ್ನ: ನುಸುಳುಕೋರನ ಹತ್ಯೆ

13/08/2024

ಪಂಜಾಬ್ ಗಡಿಯ ಮೂಲಕ ಭಾರತದೊಳಗೆ ಒಳನುಸುಳಲು ಪ್ರಯತ್ನಿಸಿದ್ದ ಶಂಕಿತ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ. ಪಾಕಿಸ್ತಾನಿ ನುಸುಳುಕೋರನ ಮೃತದೇಹ ಬಳಿ ಬಂದೂಕು ಪತ್ತೆಯಾಗಿದ್ದು, ಇದು ಅತ್ಯಾಧುನಿಕ ‘ಪಂಪ್ ಆ್ಯಕ್ಷನ್’ ಶಾಟ್‌ಗನ್ ಆಗಿದೆ ಎನ್ನಲಾಗಿದೆ.

ತರ್ನ್ ತರನ್ ಜಿಲ್ಲೆಯ ದಾಲ್ ಗ್ರಾಮದಲ್ಲಿ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಭಾರತದೊಳಗೆ ನುಸುಳಲು ಪ್ರಯತ್ನಿಸುವುದನ್ನು ಕರ್ತವ್ಯದಲ್ಲಿದ್ದ ಬಿಎಸ್‌ಫ್ ಸಿಬ್ಬಂದಿ ಗಮಿಸಿದ್ದಾರೆ. ಬಳಿಕ ಆತನಿಗೆ ಎಚ್ಚರಿಕೆ ನೀಡಿದ್ದರು. ಆದರೆ ನುಸುಳುಕೋರನು ಗಡಿಯತ್ತ ಮುನ್ನುಗ್ಗಿದ್ದಾನೆ. ಈ ವೇಳೆ ಬಿಎಸ್‌ಎಫ್ ಪಡೆಯು ಗುಂಡಿ ಕೊಂದಿದ್ದಾರೆ ಎಂದು ಗಡಿ ಭದ್ರತಾ ಪಡೆಯ ವಕ್ತಾರರು ತಿಳಿಸಿದ್ದಾರೆ.
ಘಟನೆಯಿಂದಾಗಿ ಸ್ಥಳದಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆ ಭಾರತ-ಪಾಕಿಸ್ತಾನ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಿರುವ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ