ಮಹಾಲಕ್ಷ್ಮೀ ಲೇಔಟ್ ಕಾಂಗ್ರೆಸ್ ನ ಪ್ರಭಾವಿ ಮುಖಂಡ ಆರ್, ಉಮಾಪತಿ ನಾಯ್ಡು ಬಿಜೆಪಿಗೆ ಸೇರ್ಪಡೆ
ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಮಾರಪ್ಪನಪಾಳ್ಯ ವಾರ್ಡ್ ನ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾದ ಉಮಾಪತಿ ನಾಯ್ಡು ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಹಾಗೂ ಮಂಡಲ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ರವರು ಪಾಲ್ಗೊಂಡು ಉಮಾಪತಿ ನಾಯ್ಡು ಅವರಿಗೆ ಶಾಲು ಹೊದಿಸಿ ಬಿಜೆಪಿ ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ನಂತರ ಮಾತನಾಡಿದ ಸಚಿವರು, ಉಮಾಪತಿ ನಾಯ್ಡು ಅವರು ಈ ಭಾಗದ ಪ್ರಭಾವಿ ಮುಖಂಡರಾಗಿ ಹಲವು ಜನಪರ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಇಂದು ಯಾವುದೇ ರೀತಿ ಷರತ್ತು ಇಲ್ಲದೆ ಪಕ್ಷದ ಸಿದ್ದಾಂತ ಮೆಚ್ಚಿ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇವರ ಸೇರ್ಪಡೆಯಿಂದ ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ. ಮುಂಬರುವ ವಿಧಾನಸಭಾ ಚುನಾವಣೆ ಯಲ್ಲಿ ನಾವೆಲ್ಲರೂ ಸೇರಿ ಭಾರತೀಯ ಜನತಾ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಒಗ್ಗಟ್ಟಾಗಿ ಶ್ರಮಿಸೋಣ ಎಂದು ಕರೆ ನೀಡಿದರು.
ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದ ಮುಖಂಡ ಉಮಾಪತಿ ನಾಯ್ಡು ಅವರು ಇಂದು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹಾಗೂ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ, ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ನಮ್ಮ ನೆಚ್ಚಿನ ಶಾಸಕರು ಹಾಗೂ ಸಚಿವರಾದ ಕೆ.ಗೋಪಾಲಯ್ಯ ಅವರ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಯಾವುದೇ ರೀತಿ ಷರತ್ತು ಇಲ್ಲದೆ ಪಕ್ಷದ ಸಿದ್ದಾಂತ ಮೆಚ್ಚಿ ಸ್ವಯಂ ಪ್ರೇರಣೆಯಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಗೋಪಾಲಣ್ಣ ಅವರ ನೇತೃತ್ವದಲ್ಲಿ ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸುತ್ತೇನೆ ಎಂದು ಆರ್, ಉಮಾಪತಿ ನಾಯ್ಡು ಹೇಳಿದರು. ಇದೇ ಸಂದರ್ಭದಲ್ಲಿ ಅವರ ಹಲವು ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾದ ನಾರಾಯಣ ಗೌಡ, ಉಪಾಧ್ಯಕ್ಷ ರಾದ ಎನ್ ಜಯರಾಂ, ಮಾರಪ್ಪನಪಾಳ್ಯ ವಾರ್ಡ್ ಅಧ್ಯಕ್ಷ ರಾದ ಡಾ, ನಾಗೇಂದ್ರ, ಬಿಜೆಪಿ ಮುಖಂಡರು ಹಾಗೂ ಲಹರಿ ಆಡಿಯೋ ಸಂಸ್ಥೆಯ ಲಹರಿ ವೇಲು ಬಿಜೆಪಿ ಮುಖಂಡರಾದ ಶಿವಾನಂದ್ ಮೂರ್ತಿ, ಸೇರಿದಂತೆ ಕ್ಷೇತ್ರದ ಹಲವು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























