ಸರ್ಕಾರದ ವಿರುದ್ಧ ಪಿತೂರಿ ನಡೆಸುವವರ ಬಗ್ಗೆ ಮಾಹಿತಿ ಇದೆ: ಡಿ.ಕೆ.ಶಿವಕುಮಾರ್

d k shivakumar
24/07/2023

ನಮ್ಮ ಸರಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಸರಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಆ ಬಗ್ಗೆ ನನಗೂ ನಮ್ಮದೇ ಆದ ಮೂಲಗಳಿಂದ ಮಾಹಿತಿ ಇದೆ. ಅವರು ಬೆಂಗಳೂರಲ್ಲಿ ಮಾಡದೇ ಅಲ್ಲಿಗೆ ಹೋಗಿ ಮಾಡುವುದು ಅವರ ತಂತ್ರ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ ಎಂದರು.

ಫೆರಿಫೆರಲ್ ರಿಂಗ್ ರಸ್ತೆ ಭೂ ಸ್ವಾಧೀನ ವಿಚಾರವಾಗಿ ಆ ಭಾಗದ ಕೆಲ ರೈತರು ಇಂದು ನನ್ನನ್ನು ಭೇಟಿ ಮಾಡಿದ್ದಾರೆ. ಇದೇ ತಿಂಗಳು 31 ರಂದು ಆ ರೈತರ ಜೊತೆ ಸಭೆ ಮಾಡುವುದಾಗಿ ತಿಳಿಸಿದ್ದೇನೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version