ಕೇಂದ್ರ ಬಜೆಟ್ ನಲ್ಲಿ ಅನ್ಯಾಯ: ಫೆ. 7 ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ - Mahanayaka

ಕೇಂದ್ರ ಬಜೆಟ್ ನಲ್ಲಿ ಅನ್ಯಾಯ: ಫೆ. 7 ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

dk shivakumar
02/02/2024


Provided by

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಫೆ. 7 ರಂದು ಕಾಂಗ್ರೆಸ್ ಸರಕಾರದ ಪ್ರತಿನಿಧಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ  ಎಂದು ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು,  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಫೆ.07 ರಂದು ದೆಹಲಿಯಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ ಎಂದು ತಿಳಿಸಿದರು.

ಪ್ರತಿಭಟನೆ ಸ್ಥಳಾವಕಾಶದ ಬಗ್ಗೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ