ಅಮಾನವೀಯ: ಮಹಿಳೆಯನ್ನು ಬೈಕ್ ಗೆ ಕಟ್ಟಿ ಎಳೆದೊಯ್ದ ಪಾಪಿ!
ನವದೆಹಲಿ: ಮಹಿಳೆಯನ್ನು ಬೈಕ್ ಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋಗಿರುವ ಅಮಾನವೀಯ ಘಟನೆ ರಾಜಸ್ಥಾನದ ನಗೌರ್ ಜಿಲ್ಲೆಯಲ್ಲಿ ನಡೆದಿದೆ. ಈ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಘಟನೆಯ ಬಗ್ಗೆ ಮಾತನಾಡಿದ ಪಂಚೌಡಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಸುರೇಂದ್ರ ಕುಮಾರ್, ನಹರಸಿಂಗ್ಪುರ ಗ್ರಾಮದಲ್ಲಿ ಸುಮಾರು ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದೆ. ಆರೋಪಿ ಪ್ರೇಮರಾಮ್ ಮೇಘವಾಲ್ (32) ತನ್ನ ಪತ್ನಿಯನ್ನು ಥಳಿಸಿ ನಂತರ ತನ್ನ ಬೈಕ್ ಗೆ ಕಟ್ಟಿ ಎಳೆದೊಯ್ಯುದಿದ್ದಾನೆ ಎಂದು ಅವರು ಹೇಳಿದರು.
ಆರೋಪಿ ಮೇಘವಾಲ್ ಮದ್ಯವ್ಯಸನಿಯಾಗಿದ್ದು, ಪತ್ನಿಗೆ ನಿತ್ಯ ಥಳಿಸುತ್ತಿದ್ದ ಎಂದು ಆತನ ನೆರೆಹೊರೆಯವರು ಹೇಳಿದ್ದಾರೆ. ಮಹಿಳೆಯನ್ನು ಗ್ರಾಮದ ಯಾರೊಂದಿಗೂ ಮಾತನಾಡಲು ಬಿಡುತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯು ಜೈಸಲ್ಮೇರ್ನಲ್ಲಿರುವ ತನ್ನ ಸಹೋದರಿಯನ್ನು ಭೇಟಿಯಾಗುವ ವಿಚಾರವಾಗಿ ಮೇಘವಾಲ್ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಸುರೇಂದ್ರ ಕುಮಾರ್ ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth