ಹೊಂಡಗುಂಡಿಗಳ ರಸ್ತೆಯಲ್ಲಿ ಆಂಬುಲೆನ್ಸ್ ನಲ್ಲೇ ಮಹಿಳೆ ಮಕ್ಕಳಿಗೆ ಜನ್ಮ ನೀಡಿದರು: ವಿನೂತ ಪ್ರತಿಭಟನೆ
ಕಳೆದ ಎರಡು ವರ್ಷಗಳಿಂದ ಸಂಪೂರ್ಣ ಹದೆಗೆಟ್ಟಿರುವ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ನೇತೃತ್ವದಲ್ಲಿ ಶುಕ್ರವಾರ ವಿನೂತ ಪ್ರತಿಭಟನೆ ನಡೆಸಲಾಯಿತು.
ಹೊಂಡಗುಂಡಿ ರಸ್ತೆಯಲ್ಲಿ ಎದ್ದುಬಿದ್ದು ಬಂದ ಆ್ಯಂಬುಲೆನ್ಸ್ ನಲ್ಲಿ ಮಹಿಳೆಯೊಬ್ಬರು ಮಕ್ಕಳಿಗೆ ಜನ್ಮ ನೀಡಿದರು. ಹೊಂಡಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ಗರ್ಭಿಣಿ ಸ್ತ್ರೀಯರನ್ನು ಕರೆದುಕೊಂಡು ಹೋದರೆ, ವಾಹನ ಬಿದ್ದು ರಸ್ತೆಯಲ್ಲೇ ಹೆರಿಗೆ ಆಗುತ್ತದೆ ಎಂಬುವುದನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಅಣಕು ಪ್ರದರ್ಶನದ ಮೂಲಕ ತೋರಿಸಲಾಯಿತು. ಅಣಕು ಪ್ರದರ್ಶನದಲ್ಲಿ ರಾಜು ಮತ್ತು ಹರೀಶ್ ನಟಿಸಿದರು.
ಪ್ರತಿಭಟನೆಗೆ ರೈಲು ನಿಲ್ದಾಣದ ಆಟೋ ಚಾಲಕರು ಟ್ಯಾಕ್ಸಿಮನ್ ಅಸೋಸಿಯೇಷನ್ ಬೆಂಬಲ ನೀಡಿತು. ಇಂದ್ರಾಳಿ ರೈಲ್ವೆ ಸ್ಟೇಷನ್ ರಸ್ತೆಯನ್ನು ಕೂಡಲೇ ದುರಸ್ತಿ ಮಾಡಬೇಕು. ರೈಲಿನ ಮೂಲಕ ಮಣಿಪಾಲಕ್ಕೆ ಹಲವಾರು ರೋಗಿಗಳು ಬರುತ್ತಾರೆ. ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಉಡುಪಿ ಜಿಲ್ಲೆಗೆ ರೈಲಿನ ಮೂಲಕ ಬರುತ್ತಾರೆ. ಬಂದ ಹೊರ ರಾಜ್ಯದ ಹೊರ ಜಿಲ್ಲೆಯ ಜನ ಅಭಿವೃದ್ಧಿ ಹೊಂದಿದ ಉಡುಪಿಯಲ್ಲಿ ಇಂತಹ ಹೊಂಡ ಗುಂಡಿ ರಸ್ತೆಯೇ ಎಂದು ನಮ್ಮನ್ನು ಕೇಳುವಾಗ ನಮಗೂ ಇರುಸು ಮುರುಸಾಗುತ್ತದೆ. ಹಾಗಾಗಿ ಕೂಡಲೇ ರಸ್ತೆ ದುರಸ್ತಿಗೊಳಿಸಿ ಎಂದು ನಿತ್ಯಾನಂದ ಒಳಕಾಡು ಒತ್ತಾಯಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka