ಕೆ.ಜೆ.ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣ: ಕರ್ತವ್ಯ ಲೋಪದಡಿ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು
27/11/2024
ಚಿಕ್ಕಮಗಳೂರು: ಸಚಿವ ಕೆ.ಜೆ.ಜಾರ್ಜ್ ಭಾಷಣಕ್ಕೆ ಅಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನ ಅಮಾನತು ಮಾಡಲಾಗಿದೆ.\
ಚಿಕ್ಕಮಗಳೂರು ನಗರ ಠಾಣೆಗೆ ಓಓಡಿಯಲ್ಲಿ ರೇಣುಕಾ ಪ್ರಸಾದ್ ಇನ್ಸ್ ಪೆಕ್ಟರ್ ಆಗಿದ್ದರು. ಒಕ್ಕಲಿಗರ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಜಾರ್ಜ್ ಭಾಷಣಕ್ಕೆ ಅಡ್ಡಿಯುಂಟುಪಡಿಸಿದ ಹಿನ್ನೆಲೆ ಸಚಿವ ಕೆ.ಜೆ.ಜಾರ್ಜ್ ಭಾಷಣ ಅರ್ಧಕ್ಕೆ ಮೊಟಕುಗೊಳಿಸುವಂತಾಗಿತ್ತು.
ರೆಕಾರ್ಡ್ ನಿರ್ವಹಣೆ ಲೋಪ, ಸಮಯಕ್ಕೆ ಸರಿಯಾಗಿ ಬಾರದಿರುವುದು ಹಾಗೂ ಹಲವು ಪ್ರಕರಣದಲ್ಲಿ ಕರ್ತವ್ಯಲೋಪ ಹಿನ್ನೆಲೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಮಾಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: