ಸರ್ಕಾರ ಬದಲು: ಪ್ರವೀಣ್‌ ನೆಟ್ಟಾರು ಪತ್ನಿಯ ಕೆಲಸಕ್ಕೆ ಕುತ್ತು! - Mahanayaka

ಸರ್ಕಾರ ಬದಲು: ಪ್ರವೀಣ್‌ ನೆಟ್ಟಾರು ಪತ್ನಿಯ ಕೆಲಸಕ್ಕೆ ಕುತ್ತು!

praveen nettaru
27/05/2023

ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಹಿಂದಿನ ಸರಕಾರ ಮಾಡಿರುವ ಎಲ್ಲಾ ತಾತ್ಕಾಲಿಕ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ. ನೂತನ ಸರಕಾರದ ಈ ಆದೇಶವು ಅನುಕಂಪದ ಆಧಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಲ್ಲಿ ನೌಕರಿ ಪಡೆದಿದ್ದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪತ್ನಿಯ ಕೆಲಸಕ್ಕೂ ಕುತ್ತು ತಂದಿದೆ.


Provided by

ಪ್ರವೀಣ್‌ ನೆಟ್ಟಾರ್‌ ಅವರು ಕಳೆದ ವರ್ಷ ಜುಲೈ 26ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದರು. ಇದೇ ವೇಳೆ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿಯ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಭರವಸೆ ನೀಡಿದ್ದರು. ಅದರಂತೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ 2022ರ ಸೆಪ್ಟೆಂಬರ್ 22ರಂದು ಸರಕಾರ ಆದೇಶ ಹೊರಡಿಸಿತ್ತು. ನೂತನ ಕುಮಾರಿಯವರ ವಿನಂತಿ ಮೇರೆಗೆ ಅವರಿಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ನೌಕರಿ ಕಲ್ಪಿಸಲಾಗಿತ್ತು. ಕಳೆದ ಅಕ್ಟೋಬರ್ 14ರಿಂದ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಸರಕಾರ ಬದಲಾದಾಗ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ಹೀಗಾಗಿ ನೂತನ ಕುಮಾರಿಯ ನೇಮಕಾತಿ ರದ್ದುಗೊಂಡಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಟೀಕಿಸಿರುವ ರಾಜ್ಯ ಬಿಜೆಪಿ, ಈಗ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕೀಯವನ್ನು ಮುಂದುವರಿಸಿರುವುದು ಖಂಡನೀಯ. ಪ್ರವೀಣ್ ನೆಟ್ಟಾರು ಪತ್ನಿಯನ್ನು ಉದ್ಯೋಗದಿಂದ ವಜಾ ಮಾಡುವ ಅಮಾನವೀಯ ಆದೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ