ಗಮನಿಸಿ:  ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದವರಿಗೆ ಮಹತ್ವದ  ಸೂಚನೆ - Mahanayaka

ಗಮನಿಸಿ:  ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದವರಿಗೆ ಮಹತ್ವದ  ಸೂಚನೆ

08/11/2020

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದವರಿಗಾಗಿ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವು ಆನ್‍ಲೈನ್ ದೂರು ನಿರ್ವಹಣಾ ವ್ಯವಸ್ಥೆಯನ್ನು ಪ್ರಾರಂಭಿಸಿ, 2020 ಜೂನ್ 1 ರಿಂದ ಕಾರ್ಯರೂಪಕ್ಕೆ ತರಲಾಗಿದೆ.

ಅರ್ಜಿದಾರರು ತಮ್ಮ ಕುಂದುಕೊರತೆಗಳನ್ನು www.ncm.nic.in ಆನ್‍ಲೈನ್ ಪೋರ್ಟಲ್‍ನಲ್ಲಿ ದಾಖಲಿಸಬಹುದಾಗಿದೆ. ದೂರುಗಳನ್ನು ದಾಖಲಿಸುವ ಐಡಿ ಮೂಲಕ ಅರ್ಜಿದಾರರ ದೂರುಗಳ ಸ್ಥಿತಿ ಕುರಿತು ಮಾಹಿತಿಯನ್ನು ಆನ್‍ಲೈನ್ ಪೋರ್ಟಲ್‍ನಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-24362527 ನ್ನು ಸಂಪರ್ಕಿಸಬಹುದಾಗಿದೆ. ಎಂದು ಬೆಂಗಳೂರು ನಗರ ಜಿಲ್ಲೆಯ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ