ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದ ಹಂಗಾಮಿ ಸಿಎಂ ಬೊಮ್ಮಾಯಿ

ಬೆಂಗಳೂರು: ಚುನಾವಣೆಯ ಫಲಿತಾಂಶದ ಬಳಿಕ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆರ್ ಎಸ್ ಎಸ್ ನಾಯಕರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.
ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಕ್ಕೆ ಭೇಟಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಇಂದು ಆರ್ ಎಸ್ ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ. ಬರುವಂತಹ ದಿನಗಳಲ್ಲಿ ಪಕ್ಷವನ್ನು ಮುಂದೆ ಹೇಗೆ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆ ಆಗಿದೆ.
ರಾಜ್ಯಾಧಕ್ಷರು, ವರಿಷ್ಠರ ಜೊತೆಗೆ ಹಲವಾರು ಬಾರಿ ಚರ್ಚಿಸಿ ಭಾರತೀಯ ಜನತಾ ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು ಎನ್ನುವ ತೀರ್ಮಾನ ಮಾಡುತ್ತೇವೆ ಎಂದರು.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ ಸಭೆಯನ್ನು ರಾಜ್ಯಾಧಕ್ಷರು ಕರೆಯಲಿದ್ದಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw