ವಿಪಕ್ಷ ನಾಯಕ ಆರ್.ಅಶೋಕ್ ವೈಫಲ್ಯ: ಬಿಜೆಪಿಯೊಳಗೆ ಆಂತರಿಕ ಹೋರಾಟ ಆರಂಭ - Mahanayaka

ವಿಪಕ್ಷ ನಾಯಕ ಆರ್.ಅಶೋಕ್ ವೈಫಲ್ಯ: ಬಿಜೆಪಿಯೊಳಗೆ ಆಂತರಿಕ ಹೋರಾಟ ಆರಂಭ

r ashok
02/07/2024


Provided by

ಬೆಂಗಳೂರು: ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಜನಾಭಿಪ್ರಾಯ ಮೂಡಿಸಲು ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಧ್ವನಿಯೆತ್ತಲು ವಿಪಕ್ಷ ನಾಯಕ ಆರ್.ಅಶೋಕ್ ವಿಫಲವಾಗಿದ್ದಾರೆ ಎಂದು ಸ್ವಪಕ್ಷೀಯರೇ ಟೀಕಿಸಿದ್ದು, ಕಮಲ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ವಿಪಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ವಿಪಕ್ಷ ನಾಯಕರ ಕಾರ್ಯವೈಖರಿಯ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೇವಲ ಜೈಲ್ ಭರೋ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರೆ ಸಾಲದು. ಕಾಂಗ್ರೆಸ್ ಸರ್ಕಾರವನ್ನು ಸಮರ್ಥವಾಗಿ ಕಟ್ಟಿಹಾಕುವ ಕೆಲಸ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿ.ವಿ.ಸದಾನಂದ ಗೌಡ ಕೂಡಾ ಪರೋಕ್ಷವಾಗಿ ವಿಪಕ್ಷ ನಾಯಕನ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಆಗಿರುವ ಹಿನ್ನಡೆಯ ಬಗ್ಗೆಯೂ ಅವರು ಹೈಕಮಾಂಡ್ ಗೆ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ ಹಿನ್ನಡೆಗೆ ಕಾರಣವಾಗಿರುವ ಅಂಶಗಳನ್ನು ಉಲ್ಲೇಖ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸಂಘಟಿತ ಹೋರಾಟ ನಡೆಸುತ್ತಿಲ್ಲ ಎಂಬ ಅಂಶವನ್ನು ಗಮನ ಸೆಳೆದಿದ್ದಾರೆ ಎಂದು ಹೇಳಲಾಗಿದೆ.

ಹಲವಾರು ಪ್ರಕರಣಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ಅವಕಾಶ ಇತ್ತಾದರೂ, ಅಶೋಕ್ ಅದನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎನ್ನುವ ವಿಚಾರ ಮುಂದಿಟ್ಟು ಕೊಂಡು ಬಿಜೆಪಿಯೊಳಗೆ ಇದೀಗ ಆಂತರಿಕ ಹೋರಾಟ ಆರಂಭಗೊಂಡಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ