ನಜರೆತ್ ಶಾಲೆ ಬಣಕಲ್‌ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ - Mahanayaka

ನಜರೆತ್ ಶಾಲೆ ಬಣಕಲ್‌ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ

nazareth school
08/03/2025

ಕೊಟ್ಟಿಗೆಹಾರ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಜರೆತ್ ಶಾಲೆ, ಬಣಕಲ್‌ ನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.


Provided by

ಕೊಟ್ಟಿಗೆಹಾರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ನೌಶಿಬ. ಪಿ.ಎಂ. ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಹಿಳೆಯರ ಸಮಾಜದಲ್ಲಿ ಇರುವ ಮಹತ್ವದ ಪಾತ್ರದ ಕುರಿತು ಮಾತನಾಡಿದರು. ಅವರು, “ನಾಳೆಯ ಉತ್ತಮ ಭವಿಷ್ಯದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅನನ್ಯ. ಎಲ್ಲ ಕ್ಷೇತ್ರಗಳಲ್ಲಿ ಪುರುಷರ ಸಮಾನವಾಗಿ ಮಹಿಳೆಯರು ತಮ್ಮ ಛಾಪು ಮೂಡಿಸುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟರು.

ಶಾಲಾ ಪ್ರಾಂಶುಪಾಲರಾದ ಸಿಸ್ಟರ್ ಹಿಲ್ಡ ಲೋಬೋ ಮಾತನಾಡಿ, “ಮಹಿಳೆಯರು ಹೆಚ್ಚು ಶಿಕ್ಷಣ ಪಡೆದು, ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು” ಎಂದು ಸಲಹೆ ನೀಡಿದರು.


Provided by

ಕಾರ್ಯಕ್ರಮದ ಅಂಗವಾಗಿ ಶಿಕ್ಷಕಿಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ರೇಖಾ, ರೇಷ್ಮಾ, ಚಂದನ, ಸಾಂಚಿತ, ಹಲೀಮಾ, ಅನುಷಾ, ಅನುಶ್ರೀ, ಪ್ರೆಸಿಲ್ಲ ಮೋನಿಸ್, ಸೇವೆರಿನ್, ಅಬಿದ, ಕೇಸರಿ, ರುಕ್ಷವಿ, ವಿನುತಾ, ಸಾಂಘವಿ, ಗಾಯಿತ್ರಿ, ಡಯಾನಾ, ಯಾಸ್ಮಿನ್, ವರ್ಷ ಪೈ, ಲಿನ್ಸಿ ಹಾಗೂ ಶಾಲೆಯ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಈ ವಿಶೇಷ ಕಾರ್ಯಕ್ರಮವು ಮಹಿಳೆಯರ ಮಹತ್ವವನ್ನು ಮೆಚ್ಚಿ, ಅವರ ಸಾಧನೆಗಳನ್ನು ಕೊಂಡಾಡುವ ವೇದಿಕೆಯಾಗಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ