ಯೋಗ ಇಂದು ವಿಶ್ವವನ್ನು ಒಂದಾಗಿ ಮಾಡಿದೆ: ಪ್ರಧಾನಿ ಮೋದಿ - Mahanayaka

ಯೋಗ ಇಂದು ವಿಶ್ವವನ್ನು ಒಂದಾಗಿ ಮಾಡಿದೆ: ಪ್ರಧಾನಿ ಮೋದಿ

pm modi
21/06/2025


Provided by

ವಿಶಾಖಪಟ್ಟಣಂ: ಯೋಗ ಒಬ್ಬರಿಗಾಗಿ ಅಲ್ಲ ಎಲ್ಲರಿಗಾಗಿ ಯೋಗ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ‘1 ಭೂಮಿ, 1 ಆರೋಗ್ಯಕ್ಕಾಗಿ ಯೋಗ’ ಶೀರ್ಷಿಕೆಯಡಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಗ ಇಂದು ವಿಶ್ವವನ್ನು ಒಂದಾಗಿ ಮಾಡಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ ಎಂದರು.

ಇಂದು 175 ದೇಶಗಳು ಯೋಗ ದಿನ ಆಚರಣೆ ಮಾಡುತ್ತಿವೆ. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಲು ಯೋಗ ನೆರವಾಗಲಿದೆ. ಯೋಗ ಎಂದರೆ ಎಲ್ಲರೂ ಒಂದಾಗುವುದು ಎಂದರ್ಥ. ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಮನುಷ್ಯ ಶಿಸ್ತುಬದ್ಧ ಜೀವನ ನಡೆಸಲು ಯೋಗ ಸಹಕಾರಿಯಾಗಲಿದೆ ಎಂದರು.

ಯೋಗ ಮಾನವೀಯತೆ, ಶಾಂತಿ, ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ನೆರವಾಗಲಿದೆ. ಯೋಗ ಹಲವು ದೇಶಗಳ ಜೊತೆ ಬಾಂಧವ್ಯ ವೃದ್ಧಿಗೆ ನೆರವಾಗಿದೆ. ನೌಕಾಪಡೆ ಸಿಬ್ಬಂದಿ ನೌಕೆಯಲ್ಲೇ ಯೋಗಾಸನ ಮಾಡುತ್ತಿದ್ದಾರೆ. ಪ್ರತಿಯೊಬ್ಬರೂ ಕೂಡ ಯೋಗಾಸನ ಮಾಡಬೇಕು ಎಂದು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ