7:39 AM Tuesday 18 - November 2025

ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು : ಮುಖ್ಯಮಂತ್ರಿ ಸಿದ್ದರಾಮಯ್ಯ

siddaramaya 1
22/07/2023

ಬೆಂಗಳೂರು, ಜುಲೈ 22 :ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ.

ವಿರೋಧಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನವನ್ನು ನಡೆಸಲಾಯಿತು. ಆದರೆ ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯವನ್ನು ವ್ಯರ್ಥಗೊಳಿಸಿದರು.ಅವರು ನಡವಳಿಕೆ ಸರಿಯಿರದಿದ್ದ ಕಾರಣ , ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ. ಸಭಾಧ್ಯಕ್ಷರ ಕ್ರಮಕ್ಕೂ , ನಮಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version