ದೇಶದ ರಾಜಧಾನಿಯಲ್ಲಿ ಪಟಾಕಿ ನಿಷೇಧ ಪಕ್ಕನಾ? ಪೊಲೀಸರಿಗೆ ಸುಪ್ರೀಂ ಕೋರ್ಟ್ ಕ್ಲಾಸ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಸಮಗ್ರವಾಗಿ ಜಾರಿಗೊಳಿಸಲು ವಿಫಲರಾಗಿರುವ ಪೊಲೀಸರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ನವೆಂಬರ್ 25ರೊಳಗೆ ಪಟಾಕಿ ತಯಾರಕೆದಾರರೊಂದಿಗೆ ಚರ್ಚೆ ನಡೆಸಿ ಶಾಶ್ವತ ಪಟಾಕಿ ನಿಷೇಧದ ಬಗ್ಗೆ ನಿರ್ಧರಿಸುವಂತೆ ದೆಹಲಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ.
ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ಅಗಸ್ಟಿನ್ ಜಾರ್ಜ್ ಮಾಸಿಹ್ ಅವರ ಪೀಠವು ದೆಹಲಿ ಪೊಲೀಸ್ ಕಮಿಷನರ್‌ಗೆ ತಕ್ಷಣವೇ ಪಟಾಕಿ ನಿಷೇಧ ಆದೇಶದ ಬಗ್ಗೆ ಸಂಬಂಧಿಸಿದ ಎಲ್ಲಾ ಪಟಾಕಿ ತಯಾರಕರಿಗೆ ತಿಳಿಸಲು ಮತ್ತು ಪಟಾಕಿಗಳ ಮಾರಾಟ ಹಾಗೂ ತಯಾರಿಕೆಯನ್ನು ಖಚಿತಪಡಿಸಿಕೊಳ್ಳುವಂತೆ ನಿರ್ದೇಶಿಸಿದೆ.
ಪಟಾಕಿಗಳ ಮೇಲಿನ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿಶೇಷ ಘಟಕವೊಂದನ್ನು ತೆರೆಯುವಂತೆ ನಾವು ದೆಹಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡುತ್ತೇವೆ. ಜತೆಗೆ, ಪಟಾಕಿ ನಿಷೇಧವನ್ನು ಜಾರಿಗೊಳಿಸಲು ತೆಗೆದುಕೊಂಡ ಕ್ರಮಗಳನ್ನು ದಾಖಲಿಸುವ ಮೂಲಕ ವೈಯಕ್ತಿಕ ಅಫಿಡವಿಟ್ ಅನ್ನು ಸಲ್ಲಿಸುವಂತೆಯೂ ನಿರ್ದೇಶಿಸುತ್ತೇವೆ ಎಂದೂ ನ್ಯಾಯಪೀಠ ಹೇಳಿದೆ.
ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಮಾಲಿನ್ಯ ಮುಕ್ತ ವಾತಾವರಣದಲ್ಲಿ ಬದುಕುವ ಹಕ್ಕು ಎಲ್ಲರಿಗೂ ಇದೆ. ಯಾವುದೇ ಧರ್ಮವು ಮಾಲಿನ್ಯವನ್ನು ಉತ್ತೇಜಿಸುವ ಅಥವಾ ಜನರ ಆರೋಗ್ಯದೊಂದಿಗೆ ರಾಜಿ ಮಾಡಿಕೊಳ್ಳುವ ಯಾವುದೇ ಚಟುವಟಿಕೆಯನ್ನು ಉತ್ತೇಜಿಸುವುದಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ನ್ಯಾಯಪೀಠ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj