ಗಾಝಾದಲ್ಲಿ ಇಸ್ರೇಲ್ ಮಿಲಿಟರಿ ದಾಳಿ‌ ನಡೆಸಿದ್ರೆ ಮುಂದಿನ ಅನಾಹುತ ತಡೆಯಲು ಸಾಧ್ಯವಿಲ್ಲ: ಎಚ್ಚರಿಕೆ ನೀಡಿದ ಇರಾನ್

16/10/2023

ಇಸ್ರೇಲ್ ಪಡೆಗಳು ಗಾಝಾದ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ ಇದು ಮಧ್ಯಪ್ರಾಚ್ಯದಲ್ಲಿ ಬೇರೆಡೆ ಸಂಘರ್ಷಗಳನ್ನು ಹೆಚ್ಚಿಸಬಹುದು ಎಂದು ಇರಾನ್ ಎಚ್ಚರಿಕೆ ನೀಡಿದೆ.

ನಿಶಸ್ತ್ರ ನಾಗರಿಕರು ಮತ್ತು ಗಾಝಾದ ಜನರ ವಿರುದ್ಧ ಇಸ್ರೇಲ್‌ನ ದಾಳಿಗಳು ಮುಂದುವರಿದರೆ, ಪರಿಸ್ಥಿತಿಯ ನಿಯಂತ್ರಣ ಮತ್ತು ಸಂಘರ್ಷಗಳ ವಿಸ್ತರಣೆಯನ್ನು ಯಾರಿಂದಲೂ ತಡೆಯಲು ಸಾಧ್ಯವಾಗುವುದಿಲ್ಲ ಎಂದು ಕತಾರ್‌ನ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಇರಾನ್‌ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್ ಹೇಳಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್ ಹೋರಾಟಗಾರರು ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಅಮೆರಿಕ ಇಸ್ರೇಲ್ ಗೆ ಬೇಷರತ್ ಬೆಂಬಲವನ್ನು ನೀಡಿದ್ದನ್ನು ಅಮೀರ್-ಅಬ್ದುಲ್ಲಾಹಿಯಾನ್ ಟೀಕಿಸಿದರು.

ಯುದ್ಧ ಮತ್ತು ಬಿಕ್ಕಟ್ಟಿನ ವ್ಯಾಪ್ತಿಯನ್ನು ವಿಸ್ತರಿಸುವುದನ್ನು ತಡೆಯಲು ಆಸಕ್ತಿ ಹೊಂದಿರುವವರು, ಗಾಜಾದ ನಾಗರಿಕರ ವಿರುದ್ಧ ಪ್ರಸ್ತುತ ಅನಾಗರಿಕ ದಾಳಿಗಳನ್ನು ತಡೆಯಬೇಕಾಗಿದೆ. ಈ ಸಂಘರ್ಷದಲ್ಲಿ ಹೆಜ್ಬುಲ್ಲಾ ಸೇರಿಕೊಂಡರೆ, ಯುದ್ಧವು ಪಶ್ಚಿಮ ಏಷ್ಯಾದ ಇತರ ಭಾಗಗಳಿಗೆ ಹರಡಬಹುದು. ಇಸ್ರೇಲ್ ದೊಡ್ಡ ನಷ್ಟವನ್ನು ಎದುರಿಸಬಹುದು ಎಂದು ಅವರು ಎಚ್ಚರಿಸಿದ್ದಾರೆ. ಲೆಬನಾನ್‌ನ ಹಿಜ್ಬುಲ್ಲಾ ಗುಂಪು ಯುದ್ಧದ ಎಲ್ಲಾ ಸನ್ನಿವೇಶಗಳನ್ನು ಗಣನೆಗೆ ತೆಗೆದುಕೊಂಡಿದೆ. ಹೀಗಾಗಿ ಇಸ್ರೇಲ್ ಗಾಝಾದ ಮೇಲಿನ ದಾಳಿಯನ್ನು ಸಾಧ್ಯವಾದಷ್ಟು ಬೇಗ ಕೊನೆಗೊಳಿಸಬೇಕು ಎಂದರು.

ಇತ್ತೀಚಿನ ಸುದ್ದಿ

Exit mobile version