3:18 PM Wednesday 20 - August 2025

ಇಸ್ರೇಲ್ ಶಿಕ್ಷೆ ಅನುಭವಿಸಲೇ ಬೇಕು, ಅಮೆರಿಕಕ್ಕೆ ಸರಿಪಡಿಸಲಾಗದ ಹಾನಿಯಾಗಲಿದೆ: ಇರಾನ್ ನಾಯಕ ಖಮೇನಿ ಎಚ್ಚರಿಕೆ

ayatollah ali khamenei
18/06/2025

ಟೆಹ್ರಾನ್‌: ಇರಾನ್ ಮೇಲೆ ದಾಳಿ ಮಾಡಿ ಇಸ್ರೇಲ್ ದೊಡ್ಡ ತಪ್ಪು ಮಾಡಿದೆ. ಈ ತಪ್ಪಿಗೆ ಶಿಕ್ಷೆ ಅನುಭವಿಸಲೇ ಬೇಕು ಎಂದು ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹೇಳಿದ್ದಾರೆ.

ರಾಷ್ಟ್ರವನ್ನುದ್ದೇಶಿಸಿ ಮಾತನಾಡಿರುವ ಅವರು,  ಇಸ್ರೇಲ್ ನ ದಾಳಿಯಿಂದ ಹುತಾತ್ಮರಾದವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಇಸ್ರೇಲ್ ಶಿಕ್ಷೆ ಅನುಭವಿಸುವುದು ಖಚಿತ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಅಮೆರಿಕ ಇಸ್ರೆಲ್ ಗೆ ಶಸ್ತ್ರಾಸ್ತ್ರಗಳ ನೆರವು ನೀಡಬಾರದು, ಒಂದು ವೇಳೆ ಅಮೆರಿಕ ಇಸ್ರೆಲ್ ಗೆ ನೆರವು ನೀಡಿದರೆ, ಸರಿಪಡಿಸಲಾಗದ ಹಾನಿ ಉಂಟಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಖಮೇನಿ ಎಚ್ಚರಿಕೆ ನೀಡಿದ್ದಾರೆ.

ಟ್ರಂಪ್ ನೀಡಿರುವ ಶರಣಾಗತಿಯ ಹೇಳಿಕೆ ಹಾಸ್ಯಾಸ್ಪದ ಎಂದ ಖಮೇನಿ, ಇರಾನ್ ಯಾವುದೇ ಕಾರಣಕ್ಕೂ ಶರಣಾಗುವ ಪ್ರಶ್ನೆಯೇ ಇಲ್ಲ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version