ಇಸ್ರೇಲಿ ಪ್ರಜೆ, ಹೋಮ್‌ ಸ್ಟೇ ಮಾಲಕಿ ಮೇಲೆ ಅತ್ಯಾಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ - Mahanayaka

ಇಸ್ರೇಲಿ ಪ್ರಜೆ, ಹೋಮ್‌ ಸ್ಟೇ ಮಾಲಕಿ ಮೇಲೆ ಅತ್ಯಾಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

c.m siddarmaya
09/03/2025

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ ಎಂದು ಸಿಎಂ ಸಿದ್ದರಾಮಯ್ಯ ಘಟನೆಯನ್ನು ಖಂಡಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದರು.

ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಿಎಂ ಹೇಳಿಕೆ ನೀಡಿದ್ದಾರೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ