ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ ‘ಬಾಂಬ್ ಬೆಂಗಳೂರು’ ಕಳಂಕ ತರಬೇಡಿ: ಆರ್.ಅಶೋಕ್ ಕಿಡಿ - Mahanayaka

ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ ‘ಬಾಂಬ್ ಬೆಂಗಳೂರು’ ಕಳಂಕ ತರಬೇಡಿ: ಆರ್.ಅಶೋಕ್ ಕಿಡಿ

r ashok
02/03/2024

ಬೆಂಗಳೂರು:  ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ‘ಬಾಂಬ್ ಬೆಂಗಳೂರು’ ಎಂಬ ಕಳಂಕ ತರಬೇಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಸಮಾಜಘಾತುಕ ಶಕ್ತಿಗಳಿಗೆ ರೆಕ್ಕೆಪುಕ್ಕ ಬಂದಿದೆ, ಶರ್ಟ್ ಗುಂಡಿ ಬಿಚ್ಚಿಕೊಂಡು ಎದೆ ಉಬ್ಬಿಸಿಕೊಂಡು ಓಡಾಡುತ್ತಿದ್ದಾರೆ ಎಂದು ಆರೋಪಿಸಿದರು.

ದೇಶದ ಕಾನೂನು ಇವರಿಗೆ ಅನ್ವಯವಾಗಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಗಲಾಟೆ ಆದಾಗಲೂ ಯಾವುದೇ ಕ್ರಮಕೈಗೊಳ್ಳಲಿಲ್ಲ. ರಾಜ್ಯದಲ್ಲಿ ಸರಣಿ ಕೊಲೆಗಳಾದಾಗಲೂ ಸರ್ಕಾರ ಕ್ರಮಕೈಗೊಳ್ಳಲಿಲ್ಲ ಆರೋಪಿಸಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದರು. ಆದರೆ ಆಡಳಿತಾರೂಢ ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಕುಕ್ಕರ್ ಬ್ಲಾಸ್ ಆರೋಪಿಯನ್ನು ಬ್ರದರ್ ಎಂದು ಡಿ.ಕೆ.ಶಿವಕುಮಾರ್​ ಹೇಳಿದ್ದರು. ರಾಮೇಶ್ವರಂ ಕೆಫೆ ಆರೋಪಿಯನ್ನು ಅಂಕಲ್ ಎಂದು ಹೇಳುತ್ತಾರೇನೋ? ಇವರನ್ನು ಅಂಕಲ್ ಅಂದರೆ ನಾವೆಲ್ಲರೂ ಏನಾಗಬೇಕು ಎಂದು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ದೇಶದ್ರೋಹಿಗಳನ್ನು ಬೆಂಬಲಿಸುವುದನ್ನು ನಿಲ್ಲಿಸಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡುತ್ತೇವೆ. ರಾಜ್ಯ ಸರ್ಕಾರ ಸಮಾಜಘಾತುಕರಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ