10:32 AM Saturday 12 - September 2026

ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಮುಗ್ಧ ಜೀವಿಗಳು ಬಲಿಯಾಗಿರೋದು ಮನಕಲಕಿದೆ: ಹೆಚ್.ಡಿ.ಕುಮಾರಸ್ವಾಮಿ

anekal
08/10/2023

ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ. ಈ ಬಗ್ಗೆ ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರಕಾರ ಆಸರೆಯಾಗಿ ನಿಲ್ಲಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version