ಖಾಸಗಿ ಆಸ್ಪತ್ರೆಗಳ ಹೊರಗಡೆ ದರಪಟ್ಟಿ ಪ್ರಕಟಿಸುವುದು ಕಡ್ಡಾಯ: ದಿನೇಶ್ ಗುಂಡೂರಾವ್ - Mahanayaka

ಖಾಸಗಿ ಆಸ್ಪತ್ರೆಗಳ ಹೊರಗಡೆ ದರಪಟ್ಟಿ ಪ್ರಕಟಿಸುವುದು ಕಡ್ಡಾಯ: ದಿನೇಶ್ ಗುಂಡೂರಾವ್

gundurav
22/02/2024

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಯಾವ ಖಾಸಗಿ ಆಸ್ಪತ್ರೆಯಲ್ಲಿ ದರಪಟ್ಟಿ ಪ್ರಕಟಿಸುವುದಿಲ್ಲವೋ ಅಂತಹ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಚಿಂತನೆ ನಡೆಸಿರುವುದಾಗಿ ದಿನೇಶ್ ಗುಂಡೂರಾವ್ ತಿಳಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಸುಲಿಗೆ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ಅನೇಕ ದೂರುಗಳು ಸಲ್ಲಿಕೆಯಾದ ಬೆನ್ನಲ್ಲೇ ಆರೋಗ್ಯ ಸಚಿವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಜ್ವರ, ಕೆಮ್ಮು, ನೆಗಡಿ ಎಂದು ಆಸ್ಪತ್ರೆಗಳಿಗೆ ಚಿಕಿತ್ಸೆಗೆ ತೆರಳಿದರೂ ಸಾವಿರಾರು ರೂಪಾಯಿ ಬಿಲ್ ವಸೂಲಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ನೂರಾರು ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ಅಲ್ಲದೇ ಆದೇಶ ಪಾಲನೆ ಮಾಡದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಿ ಸೀಜ್ ಮಾಡುವ ಬಗ್ಗೆಯೂ ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

 ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ