ಬುದ್ಧ, ಬಸವೇಶ್ವರ, ಅಂಬೇಡ್ಕರ್ ಅವರನ್ನು ದೇವರು ಎನ್ನುವುದು ತಪ್ಪಲ್ಲ: ಹೈಕೋರ್ಟ್

budha basava ambedkar
09/01/2024

ಬೆಂಗಳೂರು: ಜನಪ್ರತಿನಿಧಿಗಳು ದೇವರ ಬದಲು ಅಂಬೇಡ್ಕರ್‌, ಬುದ್ಧ, ಬಸವೇಶ್ವರರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವುದು ತಪ್ಪಲ್ಲ  ಎಂದು ಹೈಕೋರ್ಟ್ ಹೇಳಿದೆ.

ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿರುವ ನೂತನ ಸದಸ್ಯರು ಸಂವಿಧಾನದ ಮೂರನೇ ಷೆಡ್ಯೂಲ್‌ ಅಡಿ ನಿಬಂಧನೆಗೆ ವಿರುದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋ ರ್ಟ್‌ಇತ್ತೀಚೆಗೆ ವಜಾ ಮಾಡಿದೆ.

ಬುದ್ದ, ಬಸವೇಶ್ವರ ಮತ್ತು ಅಂಬೇಡ್ಕರ್‌ ಅವರನ್ನು ದೈವ ಸ್ವರೂಪಿಗಳು ಎಂದು ಪರಿಗಣಿಸಲಾಗಿದೆ. ಸಂವಿಧಾನವು ‘ದೇವರು’ ಅನ್ನು ಸೂಚಿಸಲು ಬಳಸಿರುವ ಅರ್ಥ ಅದೇ ಆಗಿದೆ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

ದೇವರ ಹೆಸರಿನಲ್ಲಿ ಅಥವಾ ದೇವರ ಹೆಸರು ಉಲ್ಲೇಖಿಸದೆಯೂ ಪ್ರಮಾಣ ವಚನ ಸ್ವೀಕರಿಸಬಹುದಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಕೆಲವು ಸಂದರ್ಭಗಳಲ್ಲಿ ಮೇರು ವ್ಯಕ್ತಿತ್ವಗಳಾದ ಭಗವಾನ್‌ ಬುದ್ದ, ಜಗಜ್ಯೋತಿ ಬಸವೇಶ್ವರ, ಡಾ. ಬಿ.ಆರ್‌. ಅಂಬೇಡ್ಕರ್‌ ಇತರರನ್ನು ದೇವರ ಅವತಾರ ಎನ್ನಲಾಗಿದೆ. ಇಂಗ್ಲಿಷ್‌ನಲ್ಲಿ ‘ದೇವರು’ ಎಂದು ಉಲ್ಲೇಖಿಸಲಾಗಿರುವುದರ ಅರ್ಥವು ಇದಕ್ಕೆ ಸಮೀಪದ್ದಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಬೆಳಗಾವಿಯ ಭೀಮಪ್ಪ ಗುಂಡಪ್ಪ ಗಡಾದ್‌ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಜಾ ಮಾಡುವಾಗ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ಈ ಮಹತ್ವದ ಆದೇಶ ನೀಡಿದೆ.

ಇದನ್ನೂ ಓದಿ:

Click: ಅನ್ನಭಾಗ್ಯದ ಅಕ್ಕಿಯಲ್ಲಿ ಮಂತ್ರಾಕ್ಷತೆ: ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ!

Click: ನನಗೆ ಹುಟ್ಟುಹಬ್ಬ ಅಂದ್ರೆನೇ ಅಸಹ್ಯ ಅನ್ನಿಸಿ ಬಿಟ್ಟಿದೆ: ನಟ ಯಶ್

Click: ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Click: ಎಂಥಾ ಮಕ್ಕಳಿಗೆ ಜನ್ಮ ಕೊಟ್ಟೆ ತಾಯಿ: 7 ಮಕ್ಕಳಿದ್ದರೂ ತಾಯಿ ಸತ್ತಾಗ ಒಬ್ಬರೂ ಬರಲಿಲ್ಲ!

ಇತ್ತೀಚಿನ ಸುದ್ದಿ

Exit mobile version