ಪತಿಯೇ ಕೊಂದು ನಾಟಕವಾಡುತ್ತಿದ್ದಾನೆ: ಮಹಿಳೆಯ ಸಾವಿನ ಬಗ್ಗೆ ಪೋಷಕರಿಂದ ಗಂಭೀರ ಆರೋಪ

ಹಾಸನ: ಮಹಿಳೆಯೊಬ್ಬಳು ಅನುಮಾಸ್ಪದವಾಗಿ ಸಾವನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಸುರಭಿ (24) ಮೃತಪಟ್ಟ ಮಹಿಳೆಯಾಗಿದ್ದಾರೆ. ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಎಂಬಾತನ ಜೊತೆ ಸುರಭಿಯ ವಿವಾಹವಾಗಿತ್ತು.ದಂಪತಿಗೆ ಒಂದು ವರ್ಷದ ಹೆಣ್ಣು ಮಗು ಕೂಡ ಇದೆ.
ದರ್ಶನ್ ಬೇರೆ ಹೆಣ್ಣಿನ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಇದನ್ನು ಸುರಭಿ ಪ್ರಶ್ನಿಸಿದ್ದರು ಎನ್ನಲಾಗಿದೆ. ಇದೇ ವಿಷಯವಾಗಿ ಗಂಡ ಹೆಂಡತಿ ನಡುವೆ ಆಗಾಗ ಜಗಳ ನಡೆಯುತಿತ್ತು ಎಂದು ಸುರಭಿ ಹೆತ್ತವರು ಆರೋಪಿಸಿದ್ದಾರೆ.
ಘಟನೆ ನಡೆದ ದಿನ ದರ್ಶನ್ ಸುರಭಿಯವರ ಮನೆಗೆ ಕರೆ ಮಾಡಿ ನಿಮ್ಮ ಮಗಳು ಲೋ ಬಿಪಿಯಾಗಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾನೆ ನಂತರ ನಾಗಯ್ಯನಕೊಪ್ಪಲಿನ ಮನೆಗೆ ಬಂದ ಪೋಷಕರು, ಸುರಭಿ ಲೋಬಿಪಿಯಿಂದ ಸಾವನ್ನಪ್ಪಿಲ್ಲಾ, ಬದಲಾಗಿ ಪತಿಯೇ ಆಕೆಯನ್ನು ಕೊಂದು ನಾಟವಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿಈ ಸಂಬಂಧ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth