ಮತ್ತೆ ಮಳೆಯಾಗಲಿದೆ: ಸೆಪ್ಟಂಬರ್ 11ರಿಂದ ಹಲವೆಡೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಸೆಪ್ಟಂಬರ್ 11ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬೀದರ್, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಭಾಗಮಂಡಲ, ಗೋಕರ್ಣ, ಧರ್ಮಸ್ಥಳ, ಹೊನ್ನಾವರ, ಆಗುಂಬೆ, ಬೆಂಗಳೂರು ಗ್ರಾಮಾಂತರ, ಟಿ.ಜಿ.ಹಳ್ಳಿ, ಕುಂದಾಪುರ, ಕೊಟ್ಟಿಗೆಹಾರ, ಪೊನ್ನಂಪೇಟೆ, ಮೈಸೂರು, ಮಂಕಿ ಹಾಗೂ ಮಂಗಳೂರಿನಲ್ಲಿ ಭಾನುವಾರ ಮಳೆಯಾಗಿದೆ.
ಸೆಪ್ಟೆಂಬರ್ ನಲ್ಲೂ ಅತ್ಯಧಿಕ ಮಳೆ:
ದೇಶದ ಹಲವೆಡೆ ಸೆಪ್ಟೆಂಬರ್ ತಿಂಗಳಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇತ್ತೀಚೆಗೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ, ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿ 167.9 ಮಿ.ಮೀ ಮಳೆಯಾಗುತ್ತದೆ. ಈ ಬಾರಿ, ಸಾಮಾನ್ಯಕ್ಕಿಂತ ಶೇ.109ರಷ್ಟು ಹೆಚ್ಚಿನ ಮಳೆಯಾಗುವ ಸೂಚನೆಗಳಿವೆ ಎಂದು ತಿಳಿಸಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD