‘ನಾನು ಮತ್ತು ಇಟಲಿ ಎಂದಿಗೂ ಭಿಕ್ಷೆ ಬೇಡುವುದಿಲ್ಲ’: ಟ್ರಂಪ್ ವಿರುದ್ಧ ಇಟಲಿ ಪ್ರಧಾನಿ  ಮೆಲೋನಿ ಆಕ್ರೋಶ!

trump meloni
20/06/2026

ರೋಮ್: ಜಿ–7 (G7) ಶೃಂಗಸಭೆಯಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ತಮ್ಮೊಂದಿಗೆ ಫೋಟೋ ತೆಗೆಸಿಕೊಳ್ಳಲು ಬೇಡಿಕೊಂಡಿದ್ದರು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಇಟಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಟ್ರಂಪ್ ಅವರ ಈ ಹೇಳಿಕೆಯನ್ನು “ಸಂಪೂರ್ಣ ಸುಳ್ಳು ಮತ್ತು ಕಲ್ಪಿತ” ಎಂದು ತಳ್ಳಿಹಾಕಿರುವ ಮೆಲೋನಿ, ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದು, ‘ನಮಗೆ ಭಿಕ್ಷೆ ಬೇಡುವ ಅಭ್ಯಾಸವಿಲ್ಲ’ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯಿಂದ ತಮಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ ಎಂದು ಹೇಳಿರುವ ಮೆಲೋನಿ, “ನನ್ನ ಕಡೆಯಿಂದ ಮತ್ತು ನನ್ನ ದೇಶ ಇಟಲಿಯ ಕಡೆಯಿಂದ ಒಂದು ಮಾತನ್ನು ಸ್ಪಷ್ಟಪಡಿಸಲು ಬಯಸುತ್ತೇನೆ; ನಾನು ಅಥವಾ ಇಟಲಿ ದೇಶ ಎಂದಿಗೂ ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ” ಎಂದು ನೇರವಾಗಿಯೇ ತಿರುಗೇಟು ನೀಡಿದ್ದಾರಲ್ಲದೇ,  ಟ್ರಂಪ್ ಅವರ ನಡವಳಿಕೆ ಬೇಸರ ತರಿಸಿದೆ ಎಂದು ಅವರು ಕಿಡಿಕಾರಿದ್ದಾರೆ.

ಇನ್ನೂ ಟ್ರಂಪ್ ಅವರ ಈ ವಿವಾದಾತ್ಮಕ ಹೇಳಿಕೆ ಇಟಲಿಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇಟಲಿಗೆ ಆಗಿರುವ ಅವಮಾನವನ್ನು ಪ್ರತಿಭಟಿಸಿ, ದೇಶದ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಅವರು ತಮ್ಮ ಮುಂಬರುವ ಅಮೆರಿಕ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ.

ಒಟ್ಟಾರೆಯಾಗಿ ಜಾಗತಿಕ ಮಟ್ಟದಲ್ಲಿ ಅತ್ಯಂತ ಆಪ್ತ ಮಿತ್ರರಂತೆ ಗುರುತಿಸಿಕೊಂಡಿದ್ದ ಇಬ್ಬರು ಪ್ರಮುಖ ನಾಯಕರ ನಡುವಿನ ಈ ವಾಕ್ಸಮರ, ಈಗ ಅಮೆರಿಕ ಮತ್ತು ಇಟಲಿ ನಡುವಿನ ರಾಜತಾಂತ್ರಿಕ ಸಂಬಂಧದಲ್ಲಿ ಬಿರುಕು ಮೂಡಿಸುತ್ತದೆಯೇ ಎಂಬ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version