SI, ಕಾನ್ಸ್ಟೇಬಲ್ & ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಬೇಗ ಅಪ್ಲೈ ಮಾಡಿ - Mahanayaka

SI, ಕಾನ್ಸ್ಟೇಬಲ್ & ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಬೇಗ ಅಪ್ಲೈ ಮಾಡಿ

itbp si constable and head constable recruitment
17/11/2024

ITBP SI, Constable & Head Constable Recruitment 2024:  ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನ ಟೆಲಿ ಕಮ್ಯುನಿಕೇಶನ್ ವಿಭಾಗದಲ್ಲಿ ಖಾಲಿ ಇರುವಂತಹ ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ ಹಾಗೂ ಹೆಡ್ ಕಾನ್ಸ್ಟೇಬಲ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು? ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಜಿ ಶುಲ್ಕವೆಷ್ಟು ಎಂಬ ಮಾಹಿತಿ ಸೇರಿದಂತೆ ಇತರೆ ನೇಮಕಾತಿಯ ಮಾಹಿತಿ ಇಲ್ಲಿದೆ..

 ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ವಿವರ:

ಈ ಒಂದು ನೇಮಕಾತಿಯಲ್ಲಿ ಒಟ್ಟು 526 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿದೆ.

* ಸಬ್ ಇನ್ಸ್ಪೆಕ್ಟರ್ ಹುದ್ದೆಗಳು — 92

* ಹೆಡ್ ಕಾನ್ಸ್ಟೇಬಲ್ ಹುದ್ದೆಗಳು — 383

* ಕಾನ್ಸ್ಟೇಬಲ್ ಹುದ್ದೆಗಳು – 51

ಈ ನೇಮಕಾತಿಯ ವಿಶೇಷವೇನೆಂದರೆ ಮಹಿಳೆಯರಿಗೂ ಕೂಡ ಈ ಹುದ್ದೆಗಳಲ್ಲಿ ಮೀಸಲಾತಿ ನೀಡಲಾಗಿದೆ.

ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆಗಳೇನು?

* ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವಿಜ್ಞಾನ, ಇನ್ಫಾರ್ಮಶನ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್ ಅಂಡ್ ಇನ್ಸ್ಟ್ರುಮೆಂಟೇಶನ್  ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿರಬೇಕು.

* ಅದೇ ರೀತಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವವರು ವಿಜ್ಞಾನದಲ್ಲಿ ಪಿಯುಸಿ ಪಾಸ್ ಆಗಿರಬೇಕು.

* ಕಾನ್ಸ್ಟೇಬಲ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ ಅರ್ಹತೆ – ಅರ್ಜಿ ಸಲ್ಲಿಸುವಂತವರು 18ರಿಂದ 25 ವರ್ಷದ ಒಳಗಿರಬೇಕು.

ಅರ್ಜಿ ಸಲ್ಲಿಕೆಗೆ ಅರ್ಜಿ ಶುಲ್ಕ:

* ಈ ನೇಮಕಾತಿಯ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು 2000 ಅರ್ಜಿ ಶುಲ್ಕ ಪಾವತಿಸಬೇಕು.

* ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು.

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 14, 2024 ಕೊನೆಯ ದಿನಾಂಕವಾಗಿರುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಒಂದು ನಿಗದಿತ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು.

 ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣ: https://recruitment.itbpolice.nic.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ